ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 5072 ಹೊಸ ಕರೋನಾ ಪ್ರಕರಣಗಳು ಕಂಡುಬಂದಿದೆ. ರಾಜ್ಯದಲ್ಲಿ ಪತ್ತೆ ಹಚ್ಚಲಾಗಿರುವ ಒಟ್ಟು ಕರೋನಾ ಪ್ರಕರಣಗಳ ಸಂಖ್ಯೆ 90,942 ತಲುಪಿದೆ.
ಇದುವರೆಗೂ ರಾಜ್ಯದಲ್ಲಿ 33,750 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 55,388 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 1796 ಮಂದಿ ಕರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 2036 ಹೊಸ ಪ್ರಕರಣಗಳು ಕಂಡು ಬಂದಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 43,503 ತಲುಪಿದೆ. ಇದುವರೆಗೂ 10758 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಒಟ್ಟು 862 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಇನ್ನೂ ದೇಶದಲ್ಲಿ 48916 ಹೊಸ ಪ್ರಕರಣಗಳು ಕಂಡುಬಂದಿದೆ. ಒಟ್ಟು ಪ್ರಕರಣಗಳ ಸಂಖ್ಯೆ 13 ಲಕ್ಷದ 36 ಸಾವಿರದ 861 ತಲುಪಿದೆ. 849432 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ ದೇಶಾದ್ಯಂತ 31358 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
