ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 16ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 7,040 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 2,26,966 ಕ್ಕೇರಿದೆ.
ಇದುವರೆಗೂ ರಾಜ್ಯದಲ್ಲಿ 1,41,491 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 81,512 ಸಕ್ರಿಯ ಕರೋನಾ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 6680 ಸೋಂಕಿತರು ಬಿಡುಗಡೆಹೊಂದಿದ್ದಾರೆ. 692 ಮಂದಿ ಐಸಿಯಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,131 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 89,811 ತಲುಪಿದೆ. ಒಟ್ಟು 53,782 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,444 ಮಂದಿ ಸಾವನ್ನಪ್ಪಿದ್ದಾರೆ.





