• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ; ಆಯೋಗದ ನಿರ್ಧಾರ ಪ್ರಶ್ನಿಸಲು ಕಾಂಗ್ರೆಸ್ ನಿರ್ಧಾರ

by
May 28, 2020
in ಕರ್ನಾಟಕ
0
ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ; ಆಯೋಗದ ನಿರ್ಧಾರ ಪ್ರಶ್ನಿಸಲು ಕಾಂಗ್ರೆಸ್ ನಿರ್ಧಾರ
Share on WhatsAppShare on FacebookShare on Telegram

ಗ್ರಾಮ ಪಂಚಾಯತ್‌ ಚುನಾವಣೆ ಸಂಬಂಧ ಮೂಡಿದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತ್‌ ಚುನಾವಣೆಯನ್ನ ತಾತ್ಕಾಲಿಕವಾಗಿ ಮುಂದೂಡಿ ಆದೇಶವಿತ್ತಿದೆ. ಕೋವಿಡ್-19‌ ನಿಂದ ಉಂಟಾದ ʼಅಸಾಧಾರಣ ಪರಿಸ್ಥಿತಿʼ ಎಂದು ಪರಿಗಣಿಸಿ ರಾಜ್ಯ ಚುನಾವಣಾ ಆಯೋಗವು ಚುನಾವಣೆ ಮುಂದೂಡಿದೆ. ಈಗಾಗಲೇ ರಾಜ್ಯದ ಹಲವು ಗ್ರಾಮ ಪಂಚಾಯತ್‌ಗಳ ಅಧಿಕಾರಾವಧಿ ಅಂತ್ಯವಾಗಿದೆ. ಇದರಿಂದ ಸಹಜವಾಗಿಯೇ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ, ಸೇರ್ಪಡೆ ಹಾಗೂ ಮರು ಮೀಸಲಾತಿ ಹಂಚಿಕೆ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಈ ಹಿಂದೆ ಆದೇಶವಿತ್ತಿದ್ದಾರೂ, ಲಾಕ್‌ಡೌನ್‌ ಕಾರಣದಿಂದಾಗಿ ಇದು ಸ್ಥಗಿತಗೊಂಡಿತ್ತು. ಅಲ್ಲದೇ ರಾಜ್ಯ ಸರಕಾರವು ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗವನ್ನ ಒತ್ತಾಯಿಸಿದ್ದವು.

ಆದರೆ ಇದೀಗ ಗ್ರಾಮ ಪಂಚಾಯತ್‌ ಚುನಾವಣೆ ಮುಂದೂಡಿದ್ದಕ್ಕೆ ವಿಪಕ್ಷ ನಾಯಕರು ಗರಂ ಆಗಿದ್ದಾರೆ. ಸರಣಿ ಟ್ವೀಟ್‌ ಮೂಲಕ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಪಂಚಾಯತ್‌ ರಾಜ್‌ ಕಾಯ್ದೆ 1993 ರ ಕಾಯ್ದೆಗೆ ಅಪಚಾರವಾಗಿದ್ದು, ಇದನ್ನೆಲ್ಲ ನ್ಯಾಯಾಲಯದಲ್ಲಿ ಪ್ರಶ್ನಿಸೋದಾಗಿ ತಿಳಿಸಿದ್ದಾರೆ.

ಗ್ರಾಮಪಂಚಾಯತ್‌ಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ‌ ಮುಂದೂಡಿರುವುದು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993ಕ್ಕೆ ಬಗೆದ ಅಪಚಾರ.

ಈ ಪ್ರಜಾಪ್ರಭುತ್ವ ವಿರೋಧಿ ನಿರ್ಧಾರವನ್ನು @INCKarnataka ನ್ಯಾಯಾಲಯದಲ್ಲಿ‌ ಪ್ರಶ್ನಿಸಲಿದೆ.
1/5

— Siddaramaiah (@siddaramaiah) May 28, 2020


ಗ್ರಾಮಪಂಚಾಯತ್ ಚುನಾವಣೆಯನ್ನು ಮುಂದೂಡುವ ಮೂಲಕ ರಾಜ್ಯ ಚುನಾವಣಾ ಆಯೋಗ ಆಡಾಳಿತರೂಢ @BJP4Karnataka ಹಾಕಿದ ತಾಳಕ್ಕೆ ತಕ್ಕ ಹಾಗೆ ಕುಣಿದಿದೆ. ಇದೊಂದು ಕೆಟ್ಟ ಸಂಪ್ರದಾಯ.#SavePanchayatRaj
2/5

— Siddaramaiah (@siddaramaiah) May 28, 2020


ADVERTISEMENT

ಬಿಜೆಪಿ ನಾಯಕರು ಈ ಹಿಂದೆಯೇ ಗ್ರಾಮ ಪಂಚಾಯತ್‌ ಚುನಾವಣೆ ಮುಂದೂಡಿಕೆಗೆ ಆಸಕ್ತಿ ತೋರಿದ್ದರು. ಮಾತ್ರವಲ್ಲದೇ ರಾಜ್ಯ ಸರಕಾರ ಆಡಳಿತಾಧಿಕಾರ ನೇಮಿಸಿತ್ತು. ಜೊತೆಗೆ ರಾಜ್ಯ ಸರಕಾರವೇ ಪ್ರತಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಹಾಲಿ ಪರಿಸ್ಥಿತಿಯಲ್ಲಿ ಚುನಾವಣೆ ನಡೆಸುವುದು ಕಷ್ಟ ಸಾಧ್ಯ ಎಂದು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಜಿಲ್ಲಾಧಿಕಾರಿಗಳ ವರದಿ ಪಡೆದ ರಾಜ್ಯ ಚುನಾವಣಾ ಆಯೋಗವು ಅದರಂತೆ ಸಂವಿಧಾನದ 243-K ಪರಿಚ್ಛೇದದಂತೆ ತನಗಿರುವ ಅಧಿಕಾರವನ್ನ ಬಳಸಿಕೊಂಡು ತಾತ್ಕಾಲಿಕವಾಗಿ ಚುನಾವಣೆಯನ್ನ ಮುಂದೂಡಿದೆ.

ಸಾರ್ವಜನಿಕರ ಆರೋಗ್ಯ ಸುರಕ್ಷತಾ ದೃಷ್ಟಿ ಹಾಗೂ ಚುನಾವಣಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಸಿಬ್ಬಂದಿಗಳ ಕೊರತೆ, ಸಾರಿಗೆ ಸಮಸ್ಯೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬಲ್ಲ ಆರಕ್ಷಕರ ಕೊರತೆಯ ಬಗ್ಗೆಯೂ ಗಂಭೀರವಾಗಿ ಆಲೋಚಿಸಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿಯೂ ರಾಜ್ಯ ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದು, ಮುಂದಿನ ಪರಿಸ್ಥಿತಿ ಅವಲೋಕಿಸಿ ಚುನಾವಣಾ ಸಿದ್ಧತೆ ನಡೆಸುವುದಾಗಿಯೂ ತಿಳಿಸಿದೆ.

Tags: ‌ ಕರ್ನಾಟಕ ಚುನಾವಣಾ ಆಯೋಗcovid19Election commission of karnatakagrama panchayat electionsiddaramaiahಕೋವಿಡ್-19ಗ್ರಾಮ ಪಂಚಾಯತ್‌ ಚುನಾವಣೆಸಿದ್ದರಾಮಯ್ಯ
Previous Post

ವಿಧಾನ ಪರಿಷತ್ ಸಚಿವಾಲಯದಲ್ಲಿ ಅಕ್ರಮ ನೇಮಕಾತಿಯ ಅಬ್ಬರ?

Next Post

ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ರಾಜ್ಯಸರ್ಕಾರಗಳು ಭರಿಸುವಂತೆ ಸುಪ್ರೀಂ ನಿರ್ದೇಶನ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ರಾಜ್ಯಸರ್ಕಾರಗಳು ಭರಿಸುವಂತೆ ಸುಪ್ರೀಂ ನಿರ್ದೇಶನ

ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ರಾಜ್ಯಸರ್ಕಾರಗಳು ಭರಿಸುವಂತೆ ಸುಪ್ರೀಂ ನಿರ್ದೇಶನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada