• Home
  • About Us
  • ಕರ್ನಾಟಕ
Wednesday, July 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ : ಸಿಎಂ ಸಿದ್ದರಾಮಯ್ಯ

Any Mind by Any Mind
January 20, 2024
in Uncategorized
0
Share on WhatsAppShare on FacebookShare on Telegram

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ‘’ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT


ಇದೇ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಉಷಾ ಮೆಹ್ರಾ ಆಯೋಗ ಕೂಡಾ ಅಂತಿಮವಾಗಿ ಪರಿಶಿಷ್ಟಜಾತಿಗಳ ಉಪವರ್ಘೀಕರಣ ಮಾಡಿ ಒಳಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿಯೊಂದೇ ಪರಿಹಾರ ಎಂದು ವರದಿ ನೀಡಿತ್ತು. ಆಂಧ್ರ ಪ್ರದೇಶದ ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಬಗ್ಗೆ ಅಧ್ಯಯನ ನಡೆಸಿದ್ದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ಹೀಗಿರುವಾಗ ಇದಕ್ಕೆ ಇನ್ನೊಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಅಗತ್ಯವಾದರೂ ಏನಿದೆ? ಇದು ಕೇವಲ ‘’ ಸಮಯ ಕೊಲ್ಲುವ’’ ತಂತ್ರ ಅಷ್ಟೇ ಆಗಿದೆ ಎಂದಿದ್ದಾರೆ.


ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕೆಂಬ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದ್ದರೆ ಸಂವಿಧಾನ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕು ಮತ್ತು ಶೀಘ್ರವಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕು.ಎಷ್ಟೇ ಉನ್ನತ ಮಟ್ಟದ ಸಮಿತಿಗಳನ್ನು ರಚಿಸಿದರೂ ಅವುಗಳು ಸಂವಿಧಾನವನ್ನು ಮೀರಿ ಯಾವ ಶಿಫಾರಸನ್ನೂ ಮಾಡಲು ಸಾಧ್ಯ ಇಲ್ಲ. ಸಂವಿಧಾನದ ಪರಿಚ್ಚೇದ 341(1) ಮತ್ತು (2) ರ ಪ್ರಕಾರ ಪರಿಶಿಷ್ಟ ಜಾತಿಯ ಪಟ್ಟಿಗೆ ಹೊಸ ಜಾತಿಗಳನ್ನು ಸೇರಿಸುವುದಾಗಲಿ ಇಲ್ಲವೇ ಯಾವುದಾದರೂ ಜಾತಿಯನ್ನು ಹೊರಗೆ ತೆಗೆಯಲು ಸಂವಿಧಾನಕ್ಕೆ ತಿದ್ದುಪಡಿ ಅಗತ್ಯವಾಗಿದೆ ಎನ್ನುವುದು ಸಂವಿಧಾನದ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿದವರಿಗೆ ತಿಳಿದಿರುವ ಸರಳ ಸತ್ಯ. ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲದ ಬಿಜೆಪಿ ಸಂವಿಧಾನವನ್ನೇ ಉಲ್ಲಂಘಿಸಲು ಹೊರಟ ಹಾಗೆ ಕಾಣುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.


ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡಬೇಕೆಂದು ಆಂಧ್ರಪ್ರದೇಶದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಬೇಡಿಕೆಯ ಪರಿಶೀಲನೆಗೆ ನೇಮಿಸಲಾದ ರಾಷ್ಟ್ರೀಯ ಆಯೋಗ ಶಿಫಾರಸು ಮಾಡಿದೆ’’ ಎಂದು 2023ರ ಜುಲೈ 23ರಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ.ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದರು. ಇದು ಬಿಜೆಪಿ ಸದಸ್ಯ ಜಿ.ವಿ.ಎಲ್ .ನರಸಿಂಹಮೂರ್ತಿ ಅವರ ಪ್ರಶ್ನೆಗೆ ನೀಡಿದ್ದ ಉತ್ತರವಾಗಿತ್ತು. ಈಗ ಇದೇ ಸಚಿವ ಎ.ನಾರಾಯಣ ಸ್ವಾಮಿಯವರು ಒಳಮೀಸಲಾತಿಗೆ ಸಂವಿಧಾನದ ತಿದ್ದುಪಡಿಯ ಅಗತ್ಯ ಇಲ್ಲ ಎಂದು ಹೇಳುತ್ತಿರುವುದು ವಿಪರ್ಯಾಸ.
ರಾಜ್ಯದ ಬಿಜೆಪಿ ನಾಯಕರು ಎಂದಿನಂತೆ ಎರಡೆರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯ ಈಡೇರಿಕೆಯ ಹೊಣೆ ತಮ್ಮ ಹೆಗಲ ಮೇಲೆ ಬಿದ್ದ ನಂತರ ತಳಮಳಕ್ಕೀಡಾಗಿರುವ ಬಿಜೆಪಿ ನಾಯಕರು ತಲೆಗೊಬ್ಬರಂತೆ ತಲೆಬುಡವಿಲ್ಲದ ಹೇಳಿಕೆಗಳನ್ನು ನೀಡಿ ತಮ್ಮ ಅಜ್ಞಾನ ಪ್ರದರ್ಶಿಸುತ್ತಿದ್ದಾರೆ.


ಪರಿಶಿಷ್ಟರ ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಅಗತ್ಯ ಇಲ್ಲ ಎಂದು ಮಾಜಿ ಸಚಿವ ಗೋವಿಂದಪ್ಪ ಕಾರಜೋಳ ಹೇಳುತ್ತಿದ್ದಾರೆ. ಸದಾಶಿವ ಆಯೋಗದ ವರದಿಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳುತ್ತಿದ್ದಾರೆ. ಈ ರೀತಿಯ ನಿರಾಧಾರ ಮಾತುಗಳಿಂದ ತಮ್ಮ ಅಜ್ಞಾನವನ್ನು ತಾವೇ ಪ್ರದರ್ಶಿಸುತ್ತಿದ್ದೇವೆ ಎಂಬ ಅರಿವು ಇವರಿಗೆ ಇದ್ದ ಹಾಗಿಲ್ಲ.ಮಾಜಿ ಸಚಿವ ಗೋವಿಂದ ಕಾರಜೋಳರಂತಹ ಹಿರಿಯ ದಲಿತ ನಾಯಕರು ಮತ್ತು ತಮ್ಮನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿ ಎಂದು ಕರೆದುಕೊಳ‍್ಳುವವರು ಕೂಡಾ ಸಂವಿಧಾನವನ್ನು ತಿರುಚಲು ಹೊರಟಿರುವುದು ವಿಷಾದನೀಯ. ಇಂತಹ ತಪ್ಪು ಮಾಹಿತಿಗಳನ್ನು ಮಾಜಿ ಸಚಿವ ಕಾರಜೋಳ ಹಂಚಿಕೊಳ‍್ಳುತ್ತಿರುವುದು ಖಂಡಿತ ಅವರ ಅಜ್ಞಾನದಿಂದ ಅಲ್ಲ. ದಲಿತ ವಿರೋಧಿಯಾಗಿರುವ ಆರ್ ಎಸ್ ಎಸ್ ಹೇಳಿಕೊಟ್ಟಿರುವ ಗಿಣಿಪಾಠವನ್ನು ಅವರು ಒಪ್ಪಿಸುತ್ತಿದ್ದಾರೆ ಅಷ್ಟೆ ಎಂದು ಸಿಎಂ ಹೇಳಿದ್ದಾರೆ.


ಎ..ಜೆ.ಸದಾಶಿವ ಆಯೋಗದ ವರದಿಯನ್ನು ನಮ್ಮ ಸರ್ಕಾರ ಜಾರಿಗೆ ತರಬೇಕಾಗಿತ್ತು ಎಂದು ಮಾಜಿ ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇವರು ಮೂರು ವರೆ ವರ್ಷಗಳ ಕಾಲ ತಾವು ರಾಜ್ಯದ ಮುಖ್ಯಮಂತ್ರಿಯಾಗಿರುವುದನ್ನು ಮರೆತೇ ಬಿಟ್ಟಿದ್ದಾರೆ. ಆದರೆ ರಾಜ್ಯದ ಜನತೆ ನೆನಪಲ್ಲಿ ಇಟ್ಟುಕೊಂಡಿದ್ದಾರೆ. ಈಗ ನಮ್ಮನ್ನು ಒತ್ತಾಯಿಸುವವರು ತಾವು ಅಧಿಕಾರದಲ್ಲಿದ್ದಾಗ ಯಾಕೆ ಸದಾಶಿವ ಆಯೋಗದ ವರದಿಯನ್ನು ಒಪ್ಪಿ ಜಾರಿಗೆ ತರಲಿಲ್ಲ? ಇಷ್ಷು ಮಾತ್ರವಲ್ಲ ಇದೇ ವಿಷಯದ ಅಧ್ಯಯನಕ್ಕೆ ಇನ್ನೊಂದು ಸಮಿತಿ ಮಾಡಿ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿರುವುದು ಕೂಡಾ ತಮ್ಮದೇ ನೇತೃತ್ವದ ಸರ್ಕಾರ ಎನ್ನುವುದನ್ನು ಬೊಮ್ಮಾಯಿಯವರೇ ಮರೆತಂತಿದೆ.
ರಾಜ್ಯದ ಬಿಜೆಪಿ ನಾಯಕರು ನಮ್ಮ ವಿರುದ್ದ ರಾಜಕೀಯ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಾ ವೃಥಾ ಕಾಲಹರಣ ಮಾಡದೆ ಸಂವಿಧಾನದ 341ನೇ ಪರಿಚ್ಚೇದಕ್ಕೆ ತಿದ್ದುಪಡಿ ಮಾಡಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯ ದಶಕಗಳ ಬೇಡಿಕೆಯನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಒತ್ತಡ ಹೇರಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ

Previous Post

ಜನವರಿ 26ರಿಂದ ಸಂವಿಧಾನ ಜಾಗೃತಿ ಜಾಥ, ಜಿಲ್ಲಾದ್ಯಂತ ಸಂಚಾರ : ಡಿಸಿ ಕೆವಿ ರಾಜೇಂದ್ರ

Next Post

ಪ್ರಾಣ ಪ್ರತಿಷ್ಠೆಗೆ ಮುನ್ನ ರಾಮಲಲ್ಲಾ ಫೋಟೋ ಸೋರಿಕೆ ಬಗ್ಗೆ ತನಿಖೆಯಾಗಬೇಕು: ರಾಮಮಂದಿರ ಮುಖ್ಯ ಅರ್ಚಕ

Related Posts

Uncategorized

DK Shivakumar: ಪಕ್ಷ ನನಗೆ ಸಂಘಟನೆ ಜವಾಬ್ದಾರಿ ಹಾಗೂ ಡಿಸಿಎಂ ಸ್ಥಾನ ನೀಡಿದ್ದು, ನನ್ನ ಗಮನ ಅವುಗಳತ್ತ ಮಾತ್ರ ಇದೆ..

by ಪ್ರತಿಧ್ವನಿ
July 11, 2025
0

ಮಾಧ್ಯಮದವರು ಎಷ್ಟೇ ತಿರುಗಿಸಿ ಕೇಳಿದರೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲ್ಲ. “ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ...

Read moreDetails
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

July 3, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
Next Post
ಪ್ರಾಣ ಪ್ರತಿಷ್ಠೆಗೆ ಮುನ್ನ ರಾಮಲಲ್ಲಾ ಫೋಟೋ ಸೋರಿಕೆ ಬಗ್ಗೆ ತನಿಖೆಯಾಗಬೇಕು: ರಾಮಮಂದಿರ ಮುಖ್ಯ ಅರ್ಚಕ

ಪ್ರಾಣ ಪ್ರತಿಷ್ಠೆಗೆ ಮುನ್ನ ರಾಮಲಲ್ಲಾ ಫೋಟೋ ಸೋರಿಕೆ ಬಗ್ಗೆ ತನಿಖೆಯಾಗಬೇಕು: ರಾಮಮಂದಿರ ಮುಖ್ಯ ಅರ್ಚಕ

Please login to join discussion

Recent News

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,
Top Story

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

by ಪ್ರತಿಧ್ವನಿ
July 15, 2025
ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 
Top Story

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

by Chetan
July 15, 2025
ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!
Top Story

ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!

by ಪ್ರತಿಧ್ವನಿ
July 15, 2025
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
July 15, 2025
Top Story

ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

by ಪ್ರತಿಧ್ವನಿ
July 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

July 15, 2025
ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

July 15, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada