• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಕುಣಿಕೆ ಕಾಯಂ

by
December 18, 2019
in ದೇಶ
0
ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಕುಣಿಕೆ ಕಾಯಂ
Share on WhatsAppShare on FacebookShare on Telegram

ದೇಶವನ್ನು ಬೆಚ್ಚಿ ಬೀಳಿಸಿದ್ದ ದೆಹಲಿಯ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳಿಗೆ ಸುಪ್ರೀಂಕೋರ್ಟ್ ಗಲ್ಲು ಶಿಕ್ಷೆಯನ್ನು ಕಾಯಂಗೊಳಿಸಿದೆ.

ADVERTISEMENT

ಗಲ್ಲು ಶಿಕ್ಷೆಯಿಂದ ಮುಕ್ತಿ ನೀಡುವಂತೆ ಅಪರಾಧಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದ್ದು, ಅಪರಾಧಿಗಳನ್ನು ನೇಣುಗಂಭಕ್ಕೆ ಏರಿಸುವುದು ಕಾಯಂ ಆದಂತಾಗಿದೆ.

2012 ರ ಡಿಸೆಂಬರ್ 16 ರಂದು ನಿರ್ಭಯಾಳ ಮೇಲೆ ಆರು ಮಂದಿ ದುಷ್ಕರ್ಮಿಗಳು ಚಲಿಸುತ್ತಿದ್ದ ಬಸ್ಸಿನಲ್ಲಿ ಅತ್ಯಾಚಾರ ಎಸಗಿ, ಹಿಂಸೆ ನೀಡಿ ಭೀಕರವಾಗಿ ಹತ್ಯೆ ಮಾಡಿದ್ದರು. ಸುದೀರ್ಘ ಐದು ವರ್ಷಗಳ ವಿಚಾರಣೆ ನಡೆಸಿದ್ದ ನ್ಯಾಯಾಲಯ 2017 ರಲ್ಲಿ ನಾಲ್ವರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಾಲ್ವರು ಅಪರಾಧಿಗಳ ಪೈಕಿ ಮುಕೇಶ್, ವಿನಯ್ ಮತ್ತು ಪವನ್ ಈ ಹಿಂದೆ ಗಲ್ಲು ಶಿಕ್ಷೆಯನ್ನು ರದ್ದು ಮಾಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿತ್ತು. ಇದೀಗ ಮತ್ತೋರ್ವ ಅಪರಾಧಿ ಅಕ್ಷಯ್ ಸಿಂಗ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟು ತಳ್ಳಿ ಹಾಕಿರುವುದರಿಂದ ಈ ನಾಲ್ವರಿಗೂ ಗಲ್ಲು ಶಿಕ್ಷೆ ಕಾಯಂ ಆಗಿದ್ದು, ಅವರನ್ನು ನೇಣಿಗೇರಿಸುವ ಪ್ರಕ್ರಿಯೆಗೆ ಸದ್ಯದಲ್ಲೇ ಚಾಲನೆ ದೊರೆಯುವ ಸಾಧ್ಯತೆಗಳಿವೆ.

ಸುಪ್ರೀಂಕೋರ್ಟಿನ ನ್ಯಾಯಾಧೀಶರಾದ ಆರ್.ಭಾನುಮತಿ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠವು, ಇಂದು ಅಕ್ಷಯ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡು ಗಲ್ಲು ಶಿಕ್ಷೆ ತೀರ್ಪನ್ನು ಮರುಪರಿಶೀಲನೆ ನಡೆಸಲು ಯಾವುದೇ ಆಧಾರಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಸುಪ್ರೀಂಕೋರ್ಟ್ ಈಗಾಗಲೇ ಎಸಗಿರುವ ತಪ್ಪಿಗೆ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಮತ್ತೆ ಅರ್ಜಿಯ ವಿಚಾರಣೆಯನ್ನು ನಡೆಸುವ ಅಗತ್ಯವೇ ಇಲ್ಲ ಎಂದು ಪೀಠ ಹೇಳಿದೆ.

ಗಲ್ಲು ಶಿಕ್ಷೆ ವಿಧಿಸಿರುವ ತೀರ್ಪಿನಲ್ಲಿ ಯಾವುದೇ ಲೋಪ ಕಂಡುಬರುತ್ತಿಲ್ಲ. ಹೀಗಾಗಿ ಆ ತೀರ್ಪನ್ನು ಪುನರ್ ಪರಿಶೀಲಿಸುವ ಅಗತ್ಯವಿಲ್ಲ. ನ್ಯಾಯಾಲಯ ಈ ತೀರ್ಪನ್ನು ನೀಡುತ್ತಿದ್ದಂತೆಯೇ ಅರ್ಜಿದಾರನ ಪರ ವಕೀಲ ಎ.ಪಿ.ಸಿಂಗ್ ಅವರು, ಕ್ಷಮಾದಾನ ನೀಡುವಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶವನ್ನು ಕೋರಿದರು.

ಇದಕ್ಕೆ ಪ್ರತಿಯಾಗಿ ವಾದಿಸಿದ ದೆಹಲಿ ಪರ ವಕೀಲರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕಾನೂನಿನ ಪ್ರಕಾರ ಒಂದು ವಾರದೊಳಗೆ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಈ ಸಮಯಾವಕಾಶದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ನ್ಯಾಯಪೀಠ, ನಿಗದಿತ ಅವಧಿಯೊಳಗೆ ಕ್ಷಮಾದಾನದ ಅರ್ಜಿ ಸಲ್ಲಿಸುವುದು ಬಿಡುವುದು ಅರ್ಜಿದಾರರಿಗೆ ಬಿಟ್ಟ ವಿಚಾರವಾಗಿದೆ ಎಂದಷ್ಟೇ ತಿಳಿಸಿತು.

ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖ ಮಾಡಿರುವ ಅಂಶಗಳನ್ನೇ ಉಳಿದ ಮೂವರು ಅಪರಾಧಿಗಳು ಕಳೆದ ವರ್ಷ ಸಲ್ಲಿಸಿದ್ದ ಕ್ಷಮಾದಾನದ ಅರ್ಜಿಯಲ್ಲಿ ಪ್ರಸ್ತಾಪ ಮಾಡಿದ್ದರು. ಅಲ್ಲದೇ, ತನಿಖೆಯಲ್ಲಿ ನಡೆದಿರುವ ಲೋಪಗಳ ಅಂಶಗಳನ್ನೂ ಉಲ್ಲೇಖ ಮಾಡಿದ್ದರು. ಆದರೆ, ಈ ಎಲ್ಲಾ ಅಂಶಗಳನ್ನು ಕಳೆದ ವರ್ಷವೇ ನ್ಯಾಯಾಲಯ ಪರಿಶೀಲನೆ ಮಾಡಿದ ನಂತರವೇ ಆ ಮೂವರು ಅಪರಾಧಿಗಳ ಅರ್ಜಿಗಳನ್ನು ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಈ ಅಪರಾಧಿಯ ಅರ್ಜಿಯ ಮನವಿಯಂತೆ ತೀರ್ಪನ್ನು ಮರುಪರಿಶೀಲಿಸುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಈ ಮಧ್ಯೆ, ಸುಪ್ರೀಂಕೋರ್ಟ್ ಕ್ಷಮಾದಾನದ ಅರ್ಜಿಯನ್ನು ವಜಾ ಮಾಡಿದ್ದನ್ನು ನಿರ್ಭಯಾಳ ತಾಯಿ ಸ್ವಾಗತಿಸಿದ್ದಾರೆ. ನ್ಯಾಯಾಲಯದ ಈ ತೀರ್ಪಿನಿಂದ ನನಗೆ ಸಂತಸವಾಗಿದೆ. ಪಾಟಿಯಾಲ ಹೈಕೋರ್ಟಿನಿಂದ ಮರಣ ದಂಡನೆಯ ವಾರಂಟನ್ನು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Tags: Four CriminalsHangingNirbhya Casesupreme courtThe case of rapeಅತ್ಯಾಚಾರ ಪ್ರಕರಣಕ್ಷಮಾಧಾನಗಲ್ಲು ಶಿಕ್ಷೆನಾಲ್ವರು ಆರೋಪಿಗಳುನಿರ್ಭಯ ಪ್ರಕರಣನೇಣುಗಂಭಸುಪ್ರೀಂ ಕೋರ್ಟ್
Previous Post

ಸಕ್ರೆಬೈಲ್‌ ಆನೆ ಬಿಡಾರದ ಕಣ್ಣೀರಿನ ಕಥೆ  

Next Post

ಬಿಜೆಪಿ ಹೈರಾಣಾಗಿಸುತ್ತಿವೆಯೇ ಡಿಸಿಎಂ ಹುದ್ದೆಗಳು?

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post
ಬಿಜೆಪಿ ಹೈರಾಣಾಗಿಸುತ್ತಿವೆಯೇ ಡಿಸಿಎಂ ಹುದ್ದೆಗಳು?

ಬಿಜೆಪಿ ಹೈರಾಣಾಗಿಸುತ್ತಿವೆಯೇ ಡಿಸಿಎಂ ಹುದ್ದೆಗಳು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada