ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಹಾಗೂ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಟೀಕೆ ಸುರಿಮಳೆ ಹರಿಸಿದ್ದಾರೆ. ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಸಚಿವರಾದ ಆರ್ ಅಶೋಕ್, ಶ್ರೀರಾಮುಲು ಸೇರಿದಂತೆ ಇಡೀ ಸರ್ಕಾರದ ಕಾರ್ಯವೈಖರಿಯನ್ನೇ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರದು ಪರ್ಸಂಟೇಜ್ ಸರ್ಕಾರ ಎಂದಿರುವ ಸಿದ್ದರಾಮಯ್ಯ ಲಂಚ ನೀಡದೆ ಇಲ್ಲಿ ನಯಾಪೈಸೆ ಬಿಡುಗಡೆಯಾಗುವುದಿಲ್ಲ. ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಹೊಸ ಅನುದಾನವಂತೂ ಇಲ್ಲ, ಇದರ ಜೊತೆಗೆ ಹಿಂದೆ ಘೋಷಿಸಿದ್ದ ಅನುದಾನವನ್ನೂ ತಡೆಹಿಡಿಯಲಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ.
![](https://pratidhvani.in/wp-content/uploads/2021/02/pratidhvani_2020_09_17f09c37_524c_4aa5_a9f7_60fb07975af5_Support_us_Banner_New_3-10-1.png)
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದೆ. ಅವುಗಳಿಗೆ ಹಣ ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರನ್ನು ಕೇಳಿದರೆ, ಮುಖ್ಯಮಂತ್ರಿಗಳು ತಮ್ಮ ಇಲಾಖೆಗೆ ನಯಾಪೈಸೆ ಹಣ ಕೊಟ್ಟಿಲ್ಲ ಅಂತಾರೆ. ಸರ್ಕಾರ ದಿವಾಳಿಯಾಗಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಎಂದು ಅವರು ಪ್ರಶ್ನಿಸದ್ದಾರೆ.
ತಾನಿರುವ ಹುದ್ದೆಯ ಗೌರವದ ಅರಿವಿಲ್ಲದ @nalinkateel ಒಬ್ಬ ಯಕಶ್ಚಿತ್ ರಾಜಕಾರಣಿ. ಬೆಂಕಿ ಹಾಕೋದು, ಸಮುದ್ರಕ್ಕೆ ಬಿಸಾಕೋದು ಬರೀ ಇಂತಹುದನ್ನೇ ತಲೆಯಲ್ಲಿ ತುಂಬಿಕೊಂಡಿದ್ದಾರೆ. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಹೀಗೆ ತನ್ನನ್ನು ಮುಳುಗಿಸ್ತೇನೆ ಅಂತ ಬಂದ ಬಹಳಷ್ಟು ಜನರನ್ನು ನೋಡಿದೆ. 5/11#Belagavi
— Siddaramaiah (@siddaramaiah) October 19, 2020
ಪ್ರವಾಹ ಪರಿಸ್ಥಿತಿ ಇರುವಾಗ ವೈಮಾನಿಕ ಸಮೀಕ್ಷೆ ಮಾಡುವುದು ಸರಿ, ಆದರೆ ಈಗ ಪ್ರವಾಹ ಪೀಡಿತ ಸ್ಥಳಗಳಿಗೆ ರಸ್ತೆ ಮೂಲಕ ಸಂಚರಿಸಲು, ನಿರಾಶ್ರಿತ ಕೇಂದ್ರಗಳಲ್ಲಿರುವ ಜನರನ್ನು ಭೇಟಿ ಮಾಡಲು ಅವಕಾಶವಿದ್ದಾಗ್ಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಮಾನದಲ್ಲೇ ಸಮೀಕ್ಷೆ ಮಾಡಿದರೆ ಜನರ ಕಷ್ಟ ಏನು ಅಂತ ಹೇಗೆ ತಿಳಿಯುತ್ತೆ? ಎಂದು ಕೇಳಿದ ಸಿದ್ದರಾಮಯ್ಯ, ಕಳೆದ ವರ್ಷದ ಆಗಸ್ಟ್ನಲ್ಲಿ, ಈ ಬಾರಿಯ ಆಗಸ್ಟ್ನಲ್ಲಿ, ಮತ್ತೆ ಅಕ್ಟೋಬರ್ನಲ್ಲಿ ರಾಜ್ಯದಲ್ಲಿ ಪ್ರವಾಹ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಒಮ್ಮೆಯಾದರೂ ರಾಜ್ಯಕ್ಕೆ ಭೇಟಿ ನೀಡಿ ಜನರ ಕಷ್ಟ ಕೇಳಿದ್ದಾರ? ಬಿಜೆಪಿಯ 25 ಸಂಸದರನ್ನು ರಾಜ್ಯದಿಂದ ಆರಿಸಿ ಕಳಿಸಿರುವುದೇ ಮೋದಿ ಅವರು ಕರ್ನಾಟಕವನ್ನು ಇಷ್ಟು ತಾತ್ಸಾರ ಮಾಡಲು ಕಾರಣ ಎಂದಿದ್ದಾರೆ.
ಕೇಂದ್ರ ತಂಡ ರಾಜ್ಯದ ಪ್ರವಾಹ ಸಮೀಕ್ಷೆ ನಡೆಸಿ ಇಷ್ಟು ದಿನವಾಯ್ತಲ್ಲ ಒಂದು ರೂಪಾಯಿಯಾದ್ರೂ ಪರಿಹಾರ ಬಂದಿದೆಯಾ? ಸಚಿವ ಆರ್. ಅಶೋಕ್ ಅವರು ಪರಿಹಾರ ಇವತ್ತು ಬರುತ್ತೆ, ನಾಳೆ ಬರುತ್ತೆ ಅಂತನೇ ದಿನ ದೂಡುತ್ತಿದ್ದಾರೆ, ಜನ ಕಷ್ಟದಲ್ಲಿರುವಾಗ ಪರಿಹಾರ ಕೊಡದೆ ಯಾವಾಗ ಕೊಡ್ತೀರ? 9/11#Belagavi
— Siddaramaiah (@siddaramaiah) October 19, 2020
ಕೇಂದ್ರ ತಂಡ ರಾಜ್ಯದ ಪ್ರವಾಹ ಸಮೀಕ್ಷೆ ನಡೆಸಿ ಇಷ್ಟು ದಿನವಾಯ್ತಲ್ಲ ಒಂದು ರೂಪಾಯಿಯಾದ್ರೂ ಪರಿಹಾರ ಬಂದಿದೆಯಾ? ಸಚಿವ ಆರ್. ಅಶೋಕ್ ಅವರು ಪರಿಹಾರ ಇವತ್ತು ಬರುತ್ತೆ, ನಾಳೆ ಬರುತ್ತೆ ಅಂತನೇ ದಿನ ದೂಡುತ್ತಿದ್ದಾರೆ, ಜನ ಕಷ್ಟದಲ್ಲಿರುವಾಗ ಪರಿಹಾರ ಕೊಡದೆ ಯಾವಾಗ ಕೊಡ್ತೀರ? ಎಂದು ಪ್ರಶ್ನಿಸಿದ್ದಾರೆ.
ತಾನಿರುವ ಹುದ್ದೆಯ ಗೌರವದ ಅರಿವಿಲ್ಲದ ನಳಿನ್ ಕುಮಾರ್ ಕಟೀಲ್ ಒಬ್ಬ ಯಕಶ್ಚಿತ್ ರಾಜಕಾರಣಿ. ಬೆಂಕಿ ಹಾಕೋದು, ಸಮುದ್ರಕ್ಕೆ ಬಿಸಾಕೋದು ಬರೀ ಇಂತಹುದನ್ನೇ ತಲೆಯಲ್ಲಿ ತುಂಬಿಕೊಂಡಿದ್ದಾರೆ. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಹೀಗೆ ತನ್ನನ್ನು ಮುಳುಗಿಸ್ತೇನೆ ಅಂತ ಬಂದ ಬಹಳಷ್ಟು ಜನರನ್ನು ನೋಡಿದೆ ಎಂದು ಬಿಜೆಪಿಯ ʼಕಾಂಗ್ರೆಸ್ ಮುಕ್ತ ಭಾರತʼ ಕ್ಕೆ ಎದಿರೇಟು ನೀಡಿದ್ದಾರೆ.
![](https://pratidhvani.in/wp-content/uploads/2021/02/pratidhvani_2020_09_5bd12868_eea5_4440_a071_9a9c4f340ed1_TPFI-13-20210217-050542.jpg)
ರಾಜ್ಯದಲ್ಲಿ ರೈತರು, ನೇಕಾರರು, ಕೂಲಿ ಕಾರ್ಮಿಕರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ, ಇದನ್ನು ತಡೆಯಲು ನಳಿನ್ ಕುಮಾರ್ ಕಟೀಲ್ ಏನು ಮಾಡಿದ್ದಾರೆ? ಮೊದಲು ಜನರಿಗೆ ಲಾಕ್ಡೌನ್ ಮತ್ತು ಪ್ರವಾಹದಿಂದ ಉಂಟಾದ ನಷ್ಟವನ್ನು ತುಂಬಿಕೊಡುವ ವ್ಯವಸ್ಥೆ ಮಾಡಿ. ನಿಮ್ಮ ಭಾಷಣದಿಂದ ಜನರ ಹೊಟ್ಟೆ ತುಂಬಲ್ಲ. ಕಳೆದ ವರ್ಷದ ಪ್ರವಾಹದಲ್ಲಿ ಬಿದ್ದ ಮನೆಗಳನ್ನೇ ಕಟ್ಟಿಸಿಕೊಟ್ಟಿಲ್ಲ. ಈ ವರ್ಷದ ಪ್ರವಾಹದಲ್ಲಿ ಇನ್ನಷ್ಟು ಮನೆಗಳು ಬಿದ್ದಿವೆ. ಜಿಲ್ಲಾಧಿಕಾರಿಗಳಿಗೆ ದುಡ್ಡು ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳ್ತಾರೆ. ಅವರ ಪಿ.ಡಿ ಖಾತೆಯಲ್ಲಿ ದುಡ್ಡಿದ್ದರೆ ಸಂತ್ರಸ್ತರಿಗೆ ತಲುಪತ್ತಾ? ಈ ವರ್ಷ ಯಾರಿಗಾದರೂ ಪರಿಹಾರ ಕೊಟ್ಟಿದ್ದಾರಾ? ಎಂದು ಅವರು ಪ್ರಶ್ನಿಸಿದ್ದಾರೆ.
ನಮ್ಮ ಸರ್ಕಾರ ಪ್ರಾರಂಭಿಸಿದ್ದ ಯೋಜನೆಗಳನ್ನೆಲ್ಲ ಒಂದೊಂದಾಗಿ ನಿಲ್ಲಿಸ್ತಿದ್ದಾರೆ. ಅನ್ನಭಾಗ್ಯದ ಅಕ್ಕಿಯನ್ನು 7ಕೆ.ಜಿಯಿಂದ 5ಕ್ಕೆ ಇಳಿಸಿದ್ದಾರೆ. ಇಂದಿರಾಕ್ಯಾಂಟೀನ್ ಗೆ ದುಡ್ಡು ಕೊಡದೆ ಮುಚ್ಚಲು ಹೊರಟಿದ್ದಾರೆ. ದನ-ಕುರಿ ಸತ್ತರೆ ಪರಿಹಾರ ಕೊಡ್ತಿಲ್ಲ, ಕ್ಷೀರಧಾರೆಯಲ್ಲಿ ಹಾಲಿನ ಸಬ್ಸಿಡಿ ಕಡಿಮೆ ಮಾಡಿದ್ದಾರೆ. ಕೃಷಿಭಾಗ್ಯವೂ ನಿಂತಿದೆ. 8/11
— Siddaramaiah (@siddaramaiah) October 19, 2020
ನಮ್ಮ ಸರ್ಕಾರ ಪ್ರಾರಂಭಿಸಿದ್ದ ಯೋಜನೆಗಳನ್ನೆಲ್ಲ ಒಂದೊಂದಾಗಿ ನಿಲ್ಲಿಸ್ತಿದ್ದಾರೆ. ಅನ್ನಭಾಗ್ಯದ ಅಕ್ಕಿಯನ್ನು 7 ಕೆ.ಜಿಯಿಂದ 5ಕ್ಕೆ ಇಳಿಸಿದ್ದಾರೆ. ಇಂದಿರಾ ಕ್ಯಾಂಟೀನ್ ಗೆ ದುಡ್ಡು ಕೊಡದೆ ಮುಚ್ಚಲು ಹೊರಟಿದ್ದಾರೆ. ದನ-ಕುರಿ ಸತ್ತರೆ ಪರಿಹಾರ ಕೊಡುತ್ತಿಲ್ಲ, ಕ್ಷೀರಧಾರೆಯಲ್ಲಿ ಹಾಲಿನ ಸಬ್ಸಿಡಿ ಕಡಿಮೆ ಮಾಡಿದ್ದಾರೆ. ಕೃಷಿಭಾಗ್ಯವೂ ನಿಂತಿದೆ ಎಂದು ಅವರು ಹೇಳಿದ್ದಾರೆ.
ನಮ್ಮ ಕಾಲದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹೀಗಿತ್ತಾ? @BSYBJP ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಒಮ್ಮೆ ಗೋಲಿಬಾರ್ ನಡೆಸಿ ರೈತರನ್ನು ಕೊಂದರು, ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಎರಡು ಬಾರಿ ಗೋಲಿಬಾರ್ ನಡೆಸಿ ಅಮಾಯಕರನ್ನು ಕೊಂದರು. ಇದು ಕಾನೂನು ಮತ್ತು ಸುವ್ಯವಸ್ಥೆನಾ? 10/11#Belagavi
— Siddaramaiah (@siddaramaiah) October 19, 2020