ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕರೋನಾ ಹಿನ್ನೆಲೆಯಲ್ಲಿ ಆಯುಕ್ತರು ನಗರದಾದ್ಯಂತ ಓಡಾಟ, ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದರು. ಹಾಗಾಗಿ ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕರೋನಾ ಪರೀಕ್ಷೆ ಒಳಗಾಗುವಂತೆ ಬಿಬಿಎಂಪಿ ಸಾರ್ವಜನಿಕರಲ್ಲಿ ಕೋರಿದೆ.
ಸೋಮವಾರದಂದು ಮಂಜುನಾಥ ಪ್ರಸಾದ್ ಅವರಿಗೆ ಅಲ್ಪ ಪ್ರಮಾಣದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಮಂಗಳವಾರ ಬಂದ ಪರೀಕ್ಷಾ ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಲ್ಲಿಗೆ ಆಸ್ಪತ್ರೆಯಲ್ಲಿ ಅವರು ದಾಖಲಾಗಿದ್ದಾರೆ.