• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

by
August 19, 2020
in ಕರ್ನಾಟಕ
0
ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ
Share on WhatsAppShare on FacebookShare on Telegram

ಹಳೆ ಗಾಯ ಇನ್ನೂ ಮಾಸಿಲ್ಲ. ಈಗ ಮತ್ತೆ ನಾಡಿನ ಜನರಿಗೆ ಜಲಾಘಾತ ಒಕ್ಕರಿಸಿದೆ. ಜಲಸ್ಫೋಟಕ್ಕೆ ಉತ್ತರ ಕರ್ನಾಟಕದ ಹಲವು ಗ್ರಾಮಗಳ ಸಾವಿರಾರೂ ಎಕರೆ ಬೆಳೆ ಜೊತೆಗೆ ಅವರ ಬದುಕು ಮತ್ತೆ ನೀರು ಪಾಲಾಗಿದೆ. ರಕ್ಕಸ ಪ್ರವಾಹಕ್ಕೆ ಎಲ್ಲವೂ ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಜನರ ಕಥೆ ಕೇಳಿದಾಗ ಕರಳು ಕಿತ್ತು ಬರುತ್ತೆ. ಮನೆಯ ಬಾಗಿಲಿಗೆ ಮತ್ತೆ ನದಿಗಳು ಭೇಟಿ ನೀಡಿವೆ. ಬದುಕನ್ನೇ ನಲುಗಿಸಿಬಿಟ್ಟಿವೆ. ರಸ್ತೆ, ಹೊಲ ಗದ್ದೆ, ಮನೆ ಮಠಗಳು ನೀರು ಪಾಲಾಗುತ್ತಿವೆ.

ADVERTISEMENT

ಕರ್ನಾಟಕ ಮತ್ತು ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದ ನದಿಗಳು ಉಕ್ಕಿ ಹರಿಯುತ್ತಿದ್ದು ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ವಿಜಯಪುರ ಹಾಗೂ ರಾಯಚೂರು ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಬುಧವಾರ ಬೆಳಗಾವಿ ತಾಲೂಕಿನ 15 ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಗೋಕಾಕ್ ನಗರ ಹಾಗೂ ಹೊರವಲಯದಲ್ಲಿ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಬೆಳಗಾವಿಯ ರಾಯಭಾಗ ತಾಲೂಕಿನ ಕುಡುಚಿಯ ಬಳಿಯ ಸೇತುವೆ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

ರಾಯಚೂರಿನ ಪೆದ್ದಕುರಂ ಸಮೀಪ ಕೃಷ್ಣಾ ನದಿಯಲ್ಲಿ ಸೋಮವಾರ ಸಂಜೆ ತೆಪ್ಪ ಮುಳುಗಿ ನಾಲ್ವರು ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರೆದಿದೆ. ಧಾರವಾಡದ ಹತ್ತಿರವಿರುವ ಗಂಗಾಂಬಿಕೆ ಮಂಟಪ ಮುಳುಗಡೆಯಾಗಿದೆ. ಬಸವಸಾಗರ ಜಲಾಶಯದಿಂದ ನೀರು ಬಿಟ್ಟಿರುವ ಕಾರಣ ಯಾದಗಿರಿ ರಾಯಚೂರು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೊಳ್ಳೂರು ಸೇತುವೆ ಮುಳುಗಡೆಯಾಗಿದೆ.

ಗದಗ್ ನ ಕೊಣ್ಣೂರ ಗ್ರಾಮದ ಹೊಳೆಅಗಸಿ ಭಾಗದಲ್ಲೂ 50 ಕ್ಕೂ ಅಧಿಕ ಮನೆಗಳಿಗೆ ಪ್ರವಾಹ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ ಮಾಡಿದೆ. ಅಲ್ಲಿನ ಜನರು ನೀರಲ್ಲೇ ಜಾಗರಣೆ ಮಾಡುವಂತಾಗಿದೆ. ಈ ವರ್ಷ ಜಿಲ್ಲಾಡಳಿತ ಕಾಳಜಿ ಕೇಂದ್ರದ ವ್ಯವಸ್ಥೆ ಕಲ್ಪಿಸಿಲ್ಲ ಅಂತ ಸಂತ್ರಸ್ತರು ಕಣ್ಣೀರಿಟ್ಟರು. ಪ್ರತಿವರ್ಷ ಪ್ರವಾಹ ಬಂದ್ರೆ ಈ ನಮ್ಮ ಜನ್ರ ಪರಿಸ್ಥಿತಿ ಇದೆಯಾಗಿದೆ. ಹೇಗಾದ್ರೂ ಮಾಡಿ ನಮ್ಮನ್ನ ಶಾಶ್ವತವಾಗಿ ಸ್ಥಳಾಂತರ ಮಾಡಿ, ಹೊಸ ಬದುಕಟ್ಟಿಕೊಡಿ ಅಂತ ತೋಡಿಕೊಂಡು ಕಣ್ಣೀರಿಡುತ್ತಿದ್ದಾರೆ. ಕೊಣ್ಣೂರು ಗ್ರಾಮದ ಬಳಿಯ ಹುಬ್ಬಳ್ಳಿ, ವಿಜಯಪುರ, ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218 ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ಹುಬ್ಬಳ್ಳಿಯಿಂದ ಸೊಲ್ಲಾಪೂರಕ್ಕೆ ಸಂಪರ್ಕಿಸುವ ಈ ಹೆದ್ದಾರಿ ಈಗ ಬಂದ್ ಆಗಿದ್ದು, ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಮಾರ್ಗ ಬದಲಿಸಿ ರೋಣ, ಬಾಗಲಕೋಟೆ ಮೂಲಕ ವಾಹನಗಳನ್ನು ಕಳಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಕಳೆದ ವರ್ಷದ ಪ್ರವಾಹದಲ್ಲೂ ಈ ಕೊಣ್ಣೂರು ಸೇತುವೆ ಜಖಂ ಆಗಿತ್ತು. ಹೊಸ ಸೇತುವೆ ನಿರ್ಮಿಸಿದ್ದರೆ ಹಾನಿಯನ್ನು ತಪ್ಪಿಸಬಹುದಿತ್ತು. ಇನ್ನು ಬೂದಿಹಾಳ, ಲಖಮಾಪುರ, ಕುರವಿನಕೊಪ್ಪ, ಹೊಳೆಮಣ್ಣೂರ ಕೂಡ ನಡುಗಡ್ಡಯಾಗಿದೆ. ಪ್ರವಾಹದಿಂದ ಚಿಕ್ಕು, ಪೇರಲ, ಕಬ್ಬು, ತೆಂಗು, ಹೆಸರು, ಜೋಳ, ಮೆಕ್ಕೆ ಜೋಳ ಬೆಳೆ ನೀರಲ್ಲಿ ನಾಶವಾಗಿದೆ.

ಬಸಮ್ಮ ಮಾಲಿಪಾಟೀಲ್ ಎಂಬ ಬೆಳಗಾವಿ ಜಿಲ್ಲೆಯ ಮಹಿಳೆಯೋರ್ವರು, “ಎಲೆಕ್ಷನ್ ಬಂದಾಗ ಓಟಿಗಾಗಿ ಓಡಿ ಬರ್ತಾರ. ಪ್ರವಾಹ ಬಂದಾಗ ಅದು ಕೊಡ್ತಿವಿ ಇದು ಕೊಡ್ತಿವಿ ಅಂತ ಹೇಳಿ ಸುಮ್ಮನಾಗುತಾರ. ನಮ್ಮ ಕಥೆ ಪೇಪರ್ ನ್ಯಾಗ ಬರಿತಾರ, ಟಿವಿ ನ್ಯಾಗ ತೋರಿಸ್ತಾರ, ಆದರ ಸಹಾಯಕ್ಕೆ ಮಾತ್ರ ಯಾರೂ ಬರುದಿಲ್ಲ” ಎನ್ನುತ್ತಾರೆ.

ಬಾಗಲಕೋಟೆಯ ಸಂತ್ರಸ್ಥರ ಪ್ರಕಾರ, “ನಾವು ಜೀವ ಹೋದರೂ ಸರಿ ನಮ್ಮ ಮನೆ ಬಿಟ್ಟು ಕದಲುವುದಿಲ್ಲ. ಹೇಳುವವರು ಬಂದು ಹೇಳಿ ಹೋಗುತ್ತಾರೆ. ಮೊದಲೇ ಕರೊನಾ ಭಯ. ಪರಿಹಾರ ಕೇಂದ್ರಗಳಲ್ಲಿ ನಾವು ಇರಲು ಆಗುವುದಿಲ್ಲ. ಮನೆ ಕಟ್ಟಿಸಿಕೊಡುತ್ತೇವೆ ಎಂದು ವರ್ಷದಿಂದ ಹೇಳುತ್ತಲೇ ಇದ್ದಾರೆ. ಆದರೆ ನಾವಿನ್ನೂ ಶೆಡ್ ನಲ್ಲೇ ವಾಸವಿದ್ದೇವೆ”.

ಪ್ರತಿ ಬಾರಿ ಪ್ರವಾಹ ಸಾವಿರಾರು ಜನರ ಜೀವನವನ್ನೇ ಅಸ್ತವ್ಯಸ್ತ ಮಾಡುತ್ತಿದೆ. ಇದಕ್ಕೆ ಪರಿಹಾರವಿಲ್ಲವೇ! ಆಣೆಕಟ್ಟು ಗಳನ್ನು ಎತ್ತರ ಮಾಡಬಹುದು. ಜನರಿಗೆ ಬೇರೆ ಕಡೆಗೆ ಸೂರು ಕಲ್ಪಿಸಬಹುದು. ಅನೇಕ ದಾರಿಗಳುಂಟು. ಸರ್ಕಾರ ಈ ಬಗ್ಗೆ ಚಿಂತನೆ ಮಾಡಲಿ ಎಂಬುದು ಪ್ರತಿಧ್ವನಿ ತಂಡದ ಸದಾಶಯ.

Tags: ಉತ್ತರ ಕನ್ನಡ ಜಿಲ್ಲೆ
Previous Post

ಉಗ್ರಗಾಮಿ ಸಂಪರ್ಕ: MS ರಾಮಯ್ಯ ವೈದ್ಯ NIA ವಶಕ್ಕೆ

Next Post

ಸಾಹಸಿ, ಪ್ರಚಂಡ ಕುಳ್ಳ ದ್ವಾರಕೀಶ್

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಸಾಹಸಿ

ಸಾಹಸಿ, ಪ್ರಚಂಡ ಕುಳ್ಳ ದ್ವಾರಕೀಶ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada