ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಉಳಿದ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಮುಖ್ಯಮಂತ್ರಿ ಬದಲಾವಣೆ ಎಂಬುವುದು ಕೇವಲ ವದಂತಿಯಾಗಿದೆ ಎಂದು ಹೇಳಿದ್ದಾರೆ.
ಕ್ಯಾಬಿನೆಟ್ ಅನ್ನು ವಿಸ್ತರಿಸಬೇಕೇ ಅಥವಾ ಪುನರ್‌ರಚಿಸಬೇಕೆ ಎಂದು ಪಕ್ಷದ ಕೇಂದ್ರ ನಾಯಕತ್ವ ನಿರ್ಧಾರ ತೆಗೆದುಕೊಳ್ಳುತ್ತದೆ. ಈ ಕುರಿತು ಕೇಂದ್ರ ನಾಯಕರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಎರಡು ದಿನಗಳಲ್ಲಿ ಮತ್ತೆ ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ಮಾಧ್ಯಮಗಳಿಗೆ ಅವರು ತಿಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ರಮೇಶ್ ಜಾರಕಿಹೊಳಿ ಭೇಟಿಗೆ ದೆಹಲಿ ಭೇಟಿಗೆ ಸಂಬಂಧಿಸಿದಂತೆ ಗೊಂದಲಗಳಿಗೆ ತೆರೆ ಎಳೆದ ಸವದಿ, ನೂತನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗಿದ್ದರು ಎಂದು ಹೇಳಿದ್ದಾರೆ.
“ಕಂದಾಯ ಸಚಿವ ಆರ್.ಅಶೋಕ ಮತ್ತು ನಾನು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆವು. ಅಲ್ಲಿ ಕ್ಯಾಬಿನೆಟ್ ವಿಸ್ತರಣೆ ಅಥವಾ ನಾಯಕತ್ವದ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಮತ್ತು ನಾವೆಲ್ಲರೂ ಒಂದಾಗಿದ್ದೇವೆ” ಎಂದು ಅವರು ಹೇಳಿದ್ದಾರೆ.
Also Read: ಬಿಜೆಪಿಯಲ್ಲಿ ಜಾರಕಿಹೊಳಿ ಪ್ರಾಬಲ್ಯ: ಯಡಿಯೂರಪ್ಪಗೆ ಸಕ್ಕರೆ ಲಾಬಿ ಸಂಕಷ್ಟ!
ಸಿಎಂ ಯಡಿಯೂರಪ್ಪ ಸಂಪುಟ ಪುನರ್ ರಚನೆಯ ಬೇಡಿಕೆಯೊಂದಿಗೆ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಮಾತುಕತೆ ನಡೆಸುವ ಮೊದಲೇ ದೆಹಲಿಗೆ ಭೇಟಿ ನೀಡಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದ ಬೆಳಗಾವಿಯ ಪ್ರಭಾವಿ ರಾಜಕಾರಣಿ ರಮೇಶ್ ಜಾರಕಿಹೊಳಿ, ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗಬೇಕು? ಯಾರನ್ನೆಲ್ಲಾ ಕೈಬಿಡಬೇಕು ಎಂಬ ಬಗ್ಗೆ ತಮ್ಮದೇ ಪಟ್ಟಿ ಕೊಟ್ಟಿದ್ದರು ಎನ್ನುವ ಮಾತು ಕೇಳಿಬಂದಿತ್ತು.
Also Read: ಪಕ್ಷ ಕಟ್ಟಿ ಬೆಳೆಸಿದ ಯಡಿಯೂರಪ್ಪರಿಗಿಂತ ಹೆಚ್ಚಾಯಿತು ಬಿ ಎಲ್ ಸಂತೋಷ್ ಬಲ!