ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆ ಮಟ್ಟದ ಕರೋನಾ ಪ್ರಕರಣ ದಾಖಲಾಗಿದ್ದು, ಒಂದೇ ದಿನದಲ್ಲಿ 8,380 ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿ ಕೇವಲ ಒಂದೇ ದಿನದೊಳಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೋವಿಡ್-19 ಪ್ರಕರಣ ದಾಖಲಾಗಿದ್ದು ಇದೇ ಮೊದಲು.
ಮೇ 22ರಿಂದ ಪ್ರತಿದಿನ ಸತತ 6 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣ ದಾಖಲಾಗುತ್ತಿದೆ. ಭಾರತದಲ್ಲಿ ಇದುವರೆಗೂ 1 ಲಕ್ಷದ 91 ಸಾವಿಕ್ಕೂ ಅಧಿಕ ಮಂದಿ ಕರೋನಾ ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಇಂದು ಕರೋನಾ ಸೋಂಕಿನಿಂದಾಗಿ 193 ಮಂದಿ ಅಸುನೀಗಿದ್ದು ಒಟ್ಟು ಮರಣ ಸಂಖಯೆ 5,394 ತಲುಪಿದೆ. ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 91,819 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
![](https://pratidhvani.in/wp-content/uploads/2021/02/pratidhvani_2020_04_e241e77c_4e48_4c8a_8518_5c7e48e673cc_Stay_Home_2-268.jpg)
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 990 ಪ್ರಕರಣಗಳು ದಾಖಲಾಗಿದ್ದು ಒಟ್ಟು ಕರೋನಾ ಪೀಡಿತರ ಸಂಖ್ಯೆ 20,834 ತಲುಪಿದೆ. ಕಳೆದ 24 ಗಂಟೆಗಳಲ್ಲಿ 268 ಮಂದಿ ಕರೋನಾದಿಂದ ಚೇತರಿಸಿಕೊಂಡಿದ್ದು ಒಟ್ಟು 8,746 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಮೇ 31 ರಿಂ ಜೂನ್ 1 ರ ಒಳಗೆ 12 ಮಂದಿ ಸೋಂಕಿತರು ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 523 ತಲುಪಿದೆ. ದೆಹಲಿಯಲ್ಲಿ ಸದ್ಯ 11,565 ಸಕ್ರಿಯ ಕರೋನಾ ಪ್ರಕರಣಗಳಿವೆ.
![](https://pratidhvani.in/wp-content/uploads/2021/02/WhatsApp_Image_2020_06_01_at_7_49_51_PM-1.jpeg)
ಕರ್ನಾಟಕ ಆರೋಗ್ಯ ಇಲಾಖೆ ಜೂನ್ 1ರ ಸಂಜೆ 5 ಗಂಟೆಗೆ ಬಿಡುಗಡೆಗೊಳಿಸಿದ ಅಂಕಿಅಂಶದ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 187 ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3,408 ತಲುಪಿದೆ. ಅದರಲ್ಲಿ 1,328 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿಗೆ ಇಂದು ಮತ್ತೊಂದು ಬಲಿಯಾಗಿದ್ದು, ಒಟ್ಟು ಮರಣಗೊಂಡವರ ಸಂಖ್ಯೆ 52 ತಲುಪಿದೆ.