• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವೀರಶೈವ ಲಿಂಗಾಯತರಿಗೆ ಒಬಿಸಿ ಮೀಸಲಾತಿ; BSY ಬ್ರಹ್ಮಾಸ್ತ್ರಕ್ಕೆ ಹೈಕಮಾಂಡ್ ಬ್ರೇಕ್

by
November 28, 2020
in ಕರ್ನಾಟಕ
0
ವೀರಶೈವ ಲಿಂಗಾಯತರಿಗೆ ಒಬಿಸಿ ಮೀಸಲಾತಿ; BSY ಬ್ರಹ್ಮಾಸ್ತ್ರಕ್ಕೆ ಹೈಕಮಾಂಡ್ ಬ್ರೇಕ್
Share on WhatsAppShare on FacebookShare on Telegram

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಬೆನ್ನಲ್ಲೇ ಸಮುದಾಯವನ್ನು ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸಿ ಎಂದು ಕೇಂದ್ರಕ್ಕೆ ಶಿಫಾರಸು ಮಾಡಲು ಮುಂದಾಗಿದ್ದ ಸಿಎಂ ಬಿಎಸ್‌ ಯಡಿಯೂರಪ್ಪಯೀಗ ತನ್ನ ನಿರ್ಧಾರದಿಂದ ಹಿಂಸರಿದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರ ಆದೇಶದ ಮೇರೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ಈ ನಿರ್ಧಾರ ಕೈಬಿಟ್ಟಿದ್ದಾರೆ ಎನ್ನಲಾಗಿದೆ.

ADVERTISEMENT

ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ. ಹಾಗಾಗಿಯೇ ಇತ್ತೀಚೆಗೆ ಯಾವುದೋ ತರಾತುರಿಯಲ್ಲಿ ಮರಾಠ ಅಭಿವೃದ್ಧಿ ನಿಗಮ ಬೆನ್ನಲ್ಲೇ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ 500 ಕೋಟಿ ರೂ. ಅನುದಾನ ಮಂಜೂರು ಮಾಡಿದರು. ಇದಕ್ಕೆ ಒಪ್ಪಿಗೆ ಸಿಗುತ್ತಿದ್ದಂತೆಯೇ ಒಂದೆಜ್ಜೆ ಮುಂದೋಗಿ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಲು ಮುಂದಾದರು. ಹೀಗೆ ತರಾತುರಿಯಲ್ಲಿ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾ ಹೋದರೆ ಬಿಜೆಪಿ ಸರ್ಕಾರಕ್ಕೆ ಏನಾದರೂ ಅಡಚಣೆ ಉಂಟಾಗಬಹುದು ಎಂದು ಭಾವಿಸಿ ಅಮಿತ್‌ ಶಾ ಅವರೇ ಖುದ್ದು ಕರೆ ಮಾಡಿ ಈ ವಿಚಾರ ಕೈಬಿಡುವಂತೆ ಯಡಿಯೂರಪ್ಪರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇಂದು ವೀರಶೈವ ಲಿಂಗಾಯರಿಗೆ ಓಬಿಸಿ ಮೀಸಲಾತಿ ನೀಡಿ ಮುಂದೊಂದು ದಿನ ತನ್ನ ಶಕ್ತಿ ಪ್ರದರ್ಶನ ಮಾಡಬಹುದು. ಆಗ ಇದೇ ವಿಚಾರ ಪಕ್ಷಕ್ಕೆ ಬಿಸಿ ತುಪ್ಪವಾಗಲಿದೆ. ಹಾಗಾಗಿ ಸಿಎಂ ಯಡಿಯೂರಪ್ಪರ ಶಕ್ತಿ ಪ್ರದರ್ಶನಕ್ಕೆ ಸೆಡ್ಡು ಹೊಡೆಯಲು ಬಿಜೆಪಿ ಹೈಕಮಾಂಡ್‌ ಮಧ್ಯಪ್ರವೇಶಿಸಿದೆ ಎಂದೇಳಲಾಗುತ್ತಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ವೀರಶೈ ಲಿಂಗಾಯತ ಸಮುದಾಯಕ್ಕೆ ಮಹಾರಾಷ್ಟ್ರ `ಮರಾಠ ಮೀಸಲಾತಿ’ ಮಾದರಿಯಲ್ಲಿ ಶೇ.16 ರಷ್ಟು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರವನ್ನು ಹಲವು ದಿನಗಳಿಂದ ಒತ್ತಾಯಿಸಲಾಗುತ್ತಿದೆ. ಮಿಸಲಾತಿ ಪ್ರಮಾಣ ಶೇ.50 ಮೀರಬಾರದು ಎಂದು ಸುಪ್ರೀಂ ಕೋರ್ಟ್ 1992ರಲ್ಲಿ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರಗಳಿಗೆ ಯಾವುದೇ ಸಮುದಾಯ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ ಎಂದು ಮನವರಿಕೆಯಾದಲ್ಲಿ ಅಂತವರಿಗೆ ವಿಶೇಷ ಮೀಸಲಾತಿ ನೀಡಬಹುದು. ಹಾಗಾಗಿ ಶೇ.16 ರಷ್ಟು ಮೀಸಲಾತಿ ನೀಡಿ ಎಂದು ವೀರಶೈವ ಲಿಂಗಾಯತ ಸಮುದಾಯವರು ಆಗ್ರಹಿಸುತ್ತಲೇ ಇದ್ದರು.

ಇತ್ತೀಚೆಗಂತೂ ವೀರಶೈವ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿ ಎಂದು ಪಂಚಮಸಾಲಿ ಪೀಠದ ಶ್ರೀಗಳು ಉಪವಾಸ ಸತ್ಯಾಗ್ರಹ ನಡೆಸಿದ್ದರು. ಅಲ್ಲದೆ ವೀರಶೈವ ಲಿಂಗಾಯ ಸಮುದಾಯಕ್ಕೆ ಒಬಿಸಿ ಸೇರ್ಪಡೆ ಮಾಡುವಂತೆ ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ, ಎಂ.ಬಿ.ಪಾಟೀಲ್ ಹಾಗೂ ವೀರಶೈವ ಮಹಾಸಭಾ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಎಲ್ಲರ ಮನವಿಯನ್ನು ಪುರಸ್ಕರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಸೇರ್ಪಡೆಗೆ ಶಿಫಾರಸ್ಸು ಮಾಡಲು ಮುಂದಾಗಿದ್ದರು.

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರದ 2ಎ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಹಕ್ಕೊತ್ತಾಯಕ್ಕೆ ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ನಿಯೋಗಕ್ಕೆ ಸಕಾರಾತ್ಮಕ ಭರವಸೆಯೂ ನೀಡಿದ್ದರು.

ಸದ್ಯ ಹಿಂದುಳಿದ ವರ್ಗ 3ಬಿ ಅಡಿಯಲ್ಲಿ ಶೇ.5ರಷ್ಟು ಮೀಸಲಾತಿ ಇದೆ. ವೀರಶೈವ ಲಿಂಗಾಯತ ಸೇರಿ 42 ಉಪ ಜಾತಿಗಳಿಗೆ ಮೀಸಲಾತಿ ಅನ್ವಯವಾಗಲಿದೆ. ಹೀಗಾಗಿ 2(ಎ)ಗೆ ಸೇರಿಸುವಂತೆ ವೀರಶೈವ ಮುಖಂಡರು ಒತ್ತಡ ಹೇರಿದ್ದರು. ಆದರೆ 2(ಎ)ಗೆ ಸೇರಿಸುವ ಬದಲು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಲು ಯೋಜನೆ ರೂಪಿಸಲಾಗಿತ್ತು. ಈ ಮೂಲಕ ರಾಜ್ಯ ಮೀಸಲಾತಿ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ಪ್ಲಾನ್ ಮಾಡಲಾಗಿತ್ತು. ಆದರೀಗ, ಹೈಕಮಾಂಡ್‌ ಮಧ್ಯಪ್ರವೇಶದಿಂದಾಗಿ ಈ ಪ್ರಸ್ತಾವಣೆ ಸಂಪುಟ ಸಭೆಯಿಂದ ನೆನೆಗುದಿಗೆ ಬಿತ್ತು ಎಂದು ಬಿಜೆಪಿ ವಲಯದಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ.

1994ರಲ್ಲಿಯೇ ವೀರಶೈವ ಲಿಂಗಾಯತರನ್ನು ಓಬಿಸಿಗೆ ಸೇರಿಸಬೇಕು ಎಂದು ಬೇಡಿಕೆ ಇಡಲಾಗಿದೆ. ಇದರ ಜೊತೆಗೆ ಇನ್ನು ಕೆಲವು ಸಮುದಾಯಗಳನ್ನು ಒಳಗೊಂಡು ಸಮಗ್ರ ಅಧ್ಯಯನ ನಡೆಸಿ, ಕೇಂದ್ರಕ್ಕೆ ಶಿಫಾರಸು ಸಲ್ಲಿಸಲು ನಿರ್ಧಾರಿಸಲಾಗಿದೆ. ಈ ಮೀಸಲಾತಿಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಕೇಂದ್ರ ಸರ್ಕಾರದ ಕೋಟಾದಡಿ ಮೀಸಲಾತಿ ನೀಡಿ ಎಂಬುದು ವೀರಶೈವ – ಲಿಂಗಾಯತರ ಬೇಡಿಕೆ. ಇದಕ್ಕಾಗಿ 1999ರಿಂದ ವೀರಶೈವ ಮಹಾಸಭಾ ಕೇಂದ್ರ ಸರಕಾರದೊಂದಿಗೆ ಹೋರಾಟ ಮಾಡುತ್ತಾ ಬಂದಿದೆ. ಈ ಸಂಬಂಧ ಮಹಾಸಭಾ ತನ್ನ ಪ್ರಯತ್ನ ಮುಂದುವರಿಸಬೇಕು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ಮೀಸಲಾತಿ ಎಂದರೇನು?

ಮೀಸಲಾತಿ ಎಂಬ ಪದ ಪ್ರಯೋಗವೇ ತಪ್ಪು! ಸಂವಿಧಾನದಲ್ಲಿ ಇದಕ್ಕಾಗಿ ಬಳಸಿರುವ ಪದ ಪ್ರಾತಿನಿಧ್ಯ. ವೈಯಕ್ತಿಕ ನೆಲೆಗಟ್ಟಿನಲ್ಲಿ ಇದನ್ಯಾರಿಗು ನೀಡಲಾಗಿಲ್ಲ. ವೈಯಕ್ತಿಕವಾಗಿ ನೀಡಿರುವುದು ಅವರು ಪ್ರತಿನಿಧಿಸುವ ಶೋಷಿತ ಸಮುದಾಯಗಳ ಕಾರಣಕ್ಕೆ ಮಾತ್ರ. ಈ ಅವಕಾಶವನ್ನು ಪಡೆದವರು ತಮ್ಮ ಸಮುದಾಯದ ಇತರೇ ಜನರಿಗೆ ಸಹಾಯಕವಾಗಲೆಂಬ ಕಾರಣದಿಂದ ಎನ್ನುತ್ತಾರೆ ಪ್ರಗತಿಪರ ಚಿಂತಕರು ಮತ್ತು ಹಿರಿಯ ವಕೀಲರಾದ ಸಿ.ಎಸ್ ದ್ವಾರಕನಾಥ್.

ಮೀಸಲಾತಿ ಏಕೆ?

ಸಮುದಾಯಗಳ ನಡುವಿನ ತಾರತಮ್ಯ ಹೋಗಲಾಡಿಸಿ, ಅವಕಾಶ ವಂಚಿತ ಸಮುದಾಯಗಳಿಗೆ ಸಹಾಯ ಮಾಡುವುದು ಮೀಸಲಾತಿಯ ಉದ್ದೇಶ. ಸಮಾಜದ ಹಲವಾರು ಸಮುದಾಯಗಳು ಅಸ್ಪೃಶ್ಯತೆಯ ಕಾರಣದಿಂದಾಗಿ ಶಿಕ್ಷಣದ ಹಕ್ಕು, ಸಂಪತ್ತಿನ ಹಕ್ಕು, ವ್ಯಾಪಾರದ ಹಕ್ಕು ಸೇರಿದಂತೆ ಅನೇಕ ನಾಗರಿಕ ಹಕ್ಕುಗಳಿಂದ ವಂಚಿತವಾಗಿವೆ. ಇತಿಹಾಸದಲ್ಲಿನ ಇಂತಹ ತಾರತಮ್ಯಗಳನ್ನು ನಿವಾರಿಸಿ ಭವಿಷ್ಯದಲ್ಲಿ ಅವರ ಹಕ್ಕುಗಳನ್ನು ಸಂರಕ್ಷಿಸಲು ಈ ಮೀಸಲಾತಿಯನ್ನು ಕಲ್ಪಿಸಲಾಗಿದೆ ಎಂದು ಮೀಸಲಾತಿ ಏಕೇ? ಎಂಬ ಪ್ರಶ್ನೆಗೆ ಸಿ.ಎಸ್ ದ್ವಾರಕನಾಥ್ ಉತ್ತರಿಸಿದರು.

Tags: ಮೀಸಲಾತಿ ವ್ಯವಸ್ಥೆವೀರಶೈವ ಲಿಂಗಾಯತ
Previous Post

ಡಿ. 5 ಕರ್ನಾಟಕ ಬಂದ್ ತಡೆಯಲು ಸರ್ಕಾರದ ಹರಸಾಹಸ; ಸೆಡ್ಡು ಹೊಡೆದು ನಿಂತಿರುವ ಹೋರಾಟಗಾರರು

Next Post

ಮೀಸಲಾತಿ ಎಂದರೇನು? ಅದರ ಸಾಧಕ-ಬಾಧಕಗಳೇನು?

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
ಕರ್ನಾಟಕ

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
Next Post
ಮೀಸಲಾತಿ ಎಂದರೇನು? ಅದರ ಸಾಧಕ-ಬಾಧಕಗಳೇನು?

ಮೀಸಲಾತಿ ಎಂದರೇನು? ಅದರ ಸಾಧಕ-ಬಾಧಕಗಳೇನು?

Please login to join discussion

Recent News

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada