Also Read: ನಾಲ್ಕು ರಾಜ್ಯಗಳಲ್ಲಿ ಉಪಚುನಾವಣೆ ನಡೆಸದಿರಲು ಚುನಾವಣಾ ಆಯೋಗ ತೀರ್ಮಾನ
ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದಿಂದಾಗಿ ತೆರವಾಗಿದ್ದ ಶಿರಾ ಕ್ಷೇತ್ರ ಹಾಗೂ ಶಾಸಕ ಮುನಿರತ್ನ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪಚುನಾವಣೆಯು ನವೆಂಬರ್ 3ರಂದು ನಡೆಯುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
Also Read: ಶಿರಾ ಉಪ ಚುನಾಚಣೆಗೆ ಸಂಬಂಧ ಜೆಡಿಎಸ್ ನಾಯಕರ ಸಭೆ ಕರೆದ ಹೆಚ್‌ಡಿಕೆ
ಅಕ್ಟೋಬರ್ 9 ರಂದು ಅಧಿಸೂಚನೆ ಹೊರಡಿಸಲಿದ್ದು, ಅಕ್ಟೋಬರ್ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಅಕ್ಟೋಬರ್ 17ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
Also Read: ಶಿರಾ: ಉಪಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್ ಒಳಗೆ ಭಿನ್ನಮತದ ಹೊಗೆ..!
ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ದಿವಂಗತ್ ಶಾಸಕ ಸತ್ಯನಾರಾಯಣ ಅವರ ಕುಟುಂಬಸ್ಥರೇ ಕಣಕ್ಕಿಳಿಯುವ ಸಾಧ್ಯತೆ ಬಲವಾಗಿದೆ. ಆ ಮೂಲಕ ಅನುಕಂಪವನ್ನು ಮತವನ್ನಾಗಿ ಪರಿವರ್ತಿಸುವ ಯೋಚನೆಯಲ್ಲಿ ಜೆಡಿಎಸ್ ಇದೆ. ಶಿರಾ ಉಪಚುನಾವಣೆ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ಒಳಗೆ ಆಂತರಿಕ ಜಗಳ ನಡೆದರೂ, ಟಿ.ಬಿ ಜಯಚಂದ್ರ ಅವರಿಗೆ ಟಿಕೆಟ್ ಫೈನಲ್ ಆಗಿದೆ. ಬಿಜೆಪಿಯ ಅಭ್ಯರ್ಥಿಯ ಹೆಸರು ಇನ್ನೂ ಅಧಿಕೃತವಾಗಿ ಅಂತಿಮಗೊಂಡಿಲ್ಲ.
Also Read: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಕಾಂಗ್ರೆಸ್‌ನಿಂದ ಟಿ.ಬಿ ಜಯಚಂದ್ರ ಕಣಕ್ಕೆ