ವಿದ್ಯುತ್ ದರ ಏರಿಕೆ ಮಾಡುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು, ಇದು ವಿದ್ಯುತ್ ದರ ಏರಿಕೆಗೆ ಸಕಾಲವಲ್ಲ ಎಂದು ಹೇಳಿದ್ದಾರೆ.
ಗುರುವಾರ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ಅವರು, “ಕರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ,” ಎಂದಿದ್ದಾರೆ.
ಕರೋನಾ ಸೋಂಕಿನಿಂದ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ತಲುಪಿದ್ದು, ದೇಶದ ಎಲ್ಲಾ ವಲಯಗಳು ನಷ್ಟಕ್ಕೆ ಸಿಲುಕಿವೆ. ಸಾಕಷ್ಟು ಜನರು ಕೆಲಸವನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಮುಂದೂಡುವುದು ಒಳಿತು ಎಂದು ಹೇಳಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
“ಪ್ರತಿ ಯೂನಿಟ್ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ,” ಎಂದು ಸಲಹೆ ನೀಡಿದ್ದಾರೆ.