
ಉತ್ತರ ಪ್ರದೇಶದ ಮೀರತ್ ಮೂಲದ ಸಾಜಿದ್ ಚೌಧರಿ ಸಾಮಾಜಿಕ ಮಾಧ್ಯಮದಲ್ಲಿ ನೆರೆ ರಾಷ್ಟ್ರ ಪಾಕಿಸ್ತಾನವನ್ನು ಹೊಗಳಿ ಪೋಸ್ಟ್ ಮಾಡಿದ್ದನು. ಈ ಸಂಬಂಧ ಆತನ ಮೇಲೆ ಪ್ರಕರಣ ದಾಖಲಾಗಿ ಭಾರತೀಯ ನ್ಯಾಯ ಸಂಹಿತಾ (BNS) ಕಾನೂನಿನ ಅಡಿಯಲ್ಲಿ ಕಳೆದ ತಿಂಗಳು September 13ರಂದು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದರು. ʼ ಕಮ್ರಾನ್ ಭಟ್ಟಿ ನಿಮ್ಮ ಬಗ್ಗೆ ಹೆಮ್ಮೆ ಇದೆʼ. ಪಾಕಿಸ್ತಾನ ಜಿಂದಾಬಾದ್ ಎಂದು ಪೋಸ್ಟ್ ಮಾಡಿದ್ದ.

ʼಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ (BNS 152) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಇಂಥ ಪೋಸ್ಟ್ ಹಂಚಿಕೊಳ್ಳುವುದುರಿಂದ ಜನರನ್ನು ಕೆರಳಿಸುವ ಅಥವಾ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವುದಾಗಿದೆ ( BNS 96). ಹೀಗಾಗಿ ಮಾಡಿರುವ ಆರೋಪಕ್ಕೂ, ದಾಖಲಿಸಿರುವ ಪ್ರಕರಣಕ್ಕೂ ವ್ಯತ್ಯಾಸವಿದೆʼ ಎಂದು ಅಭಿಪ್ರಾಯಪಟ್ಟ ಅಲಹಬಾದ್ ಹೈ ಕೋರ್ಟ್ ನ್ಯಾಯಾಧೀಶರಾದ ಸಂತೋಷ್ ರಾಯ್ ಅವರಿದ್ದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ.





