• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼಜನರ ಕೆಲಸ ಮಾಡಲು ಮಾತ್ರ ಚುನಾವಣೆ ಅಡ್ಡ ಬರುತ್ತದೆಯೇ?ʼ | ಉಪ ವಿಭಾಗಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
August 25, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಕೋರ್ಟ್‌ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ ಸಬೂಬು ಹೇಳ್ತೀರ ಎಂದು ಉಪ ವಿಭಾಗಾಧಿಕಾರಿ (ಎಸಿ)ಗಳ ಮೇಲೆ ಸಚಿವ ಕೃಷ್ಣ ಬೈರೇಗೌಡ ಹರಿಹಾಯ್ದರು.

ADVERTISEMENT

ಎಸಿ ನ್ಯಾಯಾಲಯಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸದೆ ಬಾಕಿ ಉಳಿಸಿಕೊಂಡಿರುವ ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಕೊಪ್ಪಳ, ಮೈಸೂರು, ಮಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳ ಆಯ್ದ 30 ಉಪ-ವಿಭಾಧಿಕಾರಿಗಳು ಹಾಗೂ ವಲಯ ಆಯುಕ್ತರ ಜೊತೆ ಇಂದು ವಿಕಾಸಸೌಧದಲ್ಲಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು.

ಈ ವೇಳೆ ಉಪ-ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳ ಇತ್ಯರ್ಥಕ್ಕೆ ಮುಂದಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಹಲವು ವರ್ಷಗಳಿಂದ ಎಸಿ ನ್ಯಾಯಾಲಯಗಳಿಗೆ ಅಲೆದಾಡಿ ಜನ ಬಸವಳಿದಿದ್ದಾರೆ.

ಹೀಗಾಗಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ನಾವು ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ ಓಡಾಡಿ ಸಭೆ ನಡೆಸಿ ಎಲ್ಲಾ ಅಧಿಕಾರಿಗಳಿಗೂ ಗುರಿ ನಿಗದಿ ಮಾಡಲಾಗಿದೆ. ಆದರೆ, ಕಳೆದ ಮಾರ್ಚ್‌ನಿಂದ ಪ್ರಕರಣ ವಿಲೇವಾರಿ ಕೆಲಸ ಮತ್ತೆ ನಿಂತ ನೀರಾಗಿದೆ ಎಂದು ತೀವ್ರ ಅಸಮಾಧಾನ ಹೊರಹಾಕಿದರು.

ರಾಜ್ಯಾದ್ಯಂತ ಎಸಿ ನ್ಯಾಯಾಲಯಗಳಲ್ಲಿ ಒಟ್ಟಾರೆ 36,430 ಪ್ರಕರಣಗಳು ಬಾಕಿ ಇವೆ. ಈ ಪೈಕಿ ಅತ್ಯಧಿಕ ಬೆಂಗಳೂರು ಉತ್ತರ ವಲಯದಲ್ಲಿ 5419 ಹಾಗೂ ಬೆಂ.ದಕ್ಷಿಣ ವಲಯದಲ್ಲಿ 4351 ಪ್ರಕರಣಗಳು ಬಾಕಿ ಇವೆ.

ಇನ್ನೂ ತುಮಕೂರು ಜಿಲ್ಲೆಯ ಎಸಿ ಕೋರ್ಟ್‍ನಲ್ಲಿ ಕಳೆದ ಮಾರ್ಚ್‍ನಲ್ಲಿ 1373 ಪ್ರಕರಣಗಳು ದಾಖಲಾಗಿದ್ದರೆ, ಮಧುಗಿರಿಯಲ್ಲಿ 898 ಪ್ರಕರಣಗಳು ದಾಖಲಾಗಿದೆ. ಆದರೆ, ಇಷ್ಟೂ ಪ್ರಕರಣಗಳ ಪೈಕಿ ಕಳೆದ ಐದು ತಿಂಗಳಿನಿಂದ ಯಾವೊಂದು ಪ್ರಕರಣದಲ್ಲೂ ಮಧುಗಿರಿ ಉಪ-ವಿಭಾಗಾಧಿಕಾರಿ ಶಿವಪ್ಪ ಹಾಗೂ ತುಮಕೂರು ಉಪ-ವಿಭಾಗಾಧಿಕಾರಿ ಗೌರವ್ ಶೆಟ್ಟಿ ಯಾವುದೇ ಕ್ರಮ ಜರಿಗಿಸಿಲ್ಲ. ಇವರ ವಿರುದ್ಧವೂ ಸಭೆಯಲ್ಲಿ ಕೃಷ್ಣ ಬೈರೇಗೌಡ ತೀವ್ರ ಅಸಮಾಧಾನ ಹೊರಹಾಕಿದರು.

ಅಲ್ಲದೆ, ಎಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಮುಂದಾಗದ ಅಧಿಕಾರಿಗಳಿಗೆ ನೋಟೀಸ್ ಜಾರಿಗೊಳಿಸಿ ಕಠಿಣ ಕ್ರಮ ಜರುಗಿಸುವಂತೆಯೂ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಕೃಷ್ಣ ಬೈರೇಗೌಡ ಸೂಚಿಸಿದರು.

ಸಭೆಯಲ್ಲಿ ಇಲಾಖೆ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತ ಸುನೀಲ್ ಕುಮಾರ್, ಪ್ರಾದೇಶಿಕ ಆಯುಕ್ತ ಆದಿತ್ಯ ಬಿಸ್ವಾಸ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Congress PartyElectionMinister Krishna Byregowda
Previous Post

ಮಂಡ್ಯದಲ್ಲಿ ಪ್ರತಿಷ್ಠೆಯ ಕಣವಾದ ಲೋಕಲ್ ಎಲೆಕ್ಷನ್; ಸ್ವಾಮಿ ವರ್ಸಸ್ ಸ್ವಾಮಿ ನಡುವೆ ಬಿಗ್ ಫೈಟ್

Next Post

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ – ಪವಾಡಸದೃಶವಾಗಿ ಬದುಕುಳಿದ ಪರ್ವತಾರೋಹಿಗಳು !

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ - ಪವಾಡಸದೃಶವಾಗಿ ಬದುಕುಳಿದ ಪರ್ವತಾರೋಹಿಗಳು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada