ಬೆಂಗಳೂರು : ಜೂನ್.04: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿಗಳನ್ನ ಜಾರಿ ಮಾಡಿದೆ. ಇದ್ರಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವೂ ಒಂದಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರ ಬಂದ ಕೂಡಲೇ ಚುನಾವಣೆಗೂ ಮುನ್ನ ಘೋಷಿಸಿದ್ದ ಶಕ್ತಿ ಯೋಜನೆಯನ್ನು ಜಾರಿಗೆ ತರಲು ಸಕಲ ತಯಾರಿ ಮಾಡಿಕೊಳ್ಳುತ್ತಿದೆ. ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣ ಕಲ್ಪಿಸುವುದು ಈ ಶಕ್ತಿ ಯೋಜನೆಯ ಉದ್ದೇಶವಾಗಿದೆ.
ಜೂನ್ 11ರಂದು ಈ ಯೋಜನೆ ಜಾರಿಗೆ ಬರಲಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂದಿನಿಂದ ಮಹಿಳೆಯರು ರಾಜ್ಯದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಕೆಲವು ಷರತ್ತುಗಳನ್ನು ಹಾಕಿದೆ. ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್ಪ್ರೆಸ್ ಬಸ್ನಲ್ಲಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ನಲ್ಲಿ ಅವಕಾಶ ಇದೆ. ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಅಂತಾರಾಜ್ಯ ಪ್ರಯಾಣಕ್ಕೆ ಉಚಿತ ಸೌಲಭ್ಯ ಇರುವುದಿಲ್ಲ.