• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ – ಸಿದ್ದರಾಮಯ್ಯ

by
December 1, 2020
in ಕರ್ನಾಟಕ
0
ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ - ಸಿದ್ದರಾಮಯ್ಯ
Share on WhatsAppShare on FacebookShare on Telegram

ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ನಾವು ಕರೆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಅವರು ನನ್ನನ್ನು ಕರೆದೂ ಇಲ್ಲ, ನಾನು ಬರುತ್ತೇನೆ ಅಥವಾ ಬರುವುದಿಲ್ಲ ಎಂದು ಅವರಿಗೆ ಹೇಳಿಲ್ಲ. ಈಶ್ವರಪ್ಪ ಈ ವಿಚಾರದಲ್ಲಿ ಸುಳ್ಳು ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೋದಿಯವರು ಪ್ರಧಾನಿಯಾಗಿ ಆರೂವರೆ ವರ್ಷಗಳಾದವು. ಗೊಂಡ, ರಾಜಗೊಂಡ ಸಮುದಾಯದವರು ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆ ಬಗ್ಗೆ ಈಶ್ವರಪ್ಪ ಅವರು ಏಕೆ ಆದೇಶ ಮಾಡಿಸಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆರ್‌ಎಸ್ಎಸ್ ನವರು ಎಂದೂ ಮೀಸಲಾತಿ ಪರ ಇಲ್ಲ. ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಮತ್ತು ಮಂಡಲ್ ವರದಿಯನ್ನು ಅವರು ಸ್ವಾಗತ ಮಾಡಿದರೇ? ಎಲ್ಲಾ ಸಂದರ್ಭದಲ್ಲಿಯೂ ವಿರೋಧ ಮಾಡಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿವೆ. ಆರ್ ಎಸ್ ಎಸ್ ಸ್ಥಾಪಕರಾದ ಹೆಡಗೆವಾರ್ ಆಗಲಿ, ಎಂ.ಎಸ್ ಗೋಳವಾಲ್ಕರ್ ಇಲ್ಲವೇ ಇತರ ಆರ್ ಎಸ್ ಎಸ್ ನಾಯಕರು ಎಂದಾದರೂ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಹೋರಾಟ ಮಾಡಿದ್ದಾರೆಯೇ? ಕುರುಬರ ನಾಯಕ ನಾನೇ ಎಂದು ಈಶ್ವರಪ್ಪ ಹೇಳಿಕೊಳ್ಳಲಿ. ಅದಕ್ಕೆ ನನ್ನ ತಕರಾರು ಇಲ್ಲ. ನಾಯಕ ಯಾರೆಂದು ಜನ ತೀರ್ಮಾನ ಮಾಡುತ್ತಾರೆ, ನಾವೇ ಘೋಷಿಸಿಕೊಳ್ಳುವುದಲ್ಲ ಎಂದು ಈಶ್ವರಪ್ಪರಿಗೆ ಟಾಂಗ್ ನೀಡಿದ್ದಾರೆ.

ಕುರುಬರನ್ನು ಎಸ್ಟಿಗೆ ಸೇರಿಸುವ ಮೊದಲು ಎಸ್ಟಿ ಮೀಸಲಾತಿಯನ್ನು ಶೇ. 3ರಿಂದ ಕನಿಷ್ಠ ಶೇ. 20ಕ್ಕೆ ಹೆಚ್ಚಿಸಬೇಕು. ಅದಕ್ಕೂ ಹೋರಾಟ ಮಾಡಬೇಕಿದೆ. ವಾಲ್ಮೀಕಿ ಸಮುದಾಯದವರು ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ಹೋರಾಟ ಮಾಡುತ್ತಿದ್ದಾರೆ. ಮೀಸಲು ಪ್ರಮಾಣ ಶೇ. 3ರಷ್ಟೇ ಇದ್ದರೆ ಕುರುಬ ಸಮುದಾಯವನ್ನು ಎಸ್‌ಟಿ ಗೆ ಸೇರಿಸಿದರೆ ಏನು ಲಾಭ? ಕುರುಬ ಸಮುದಾಯದ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಆಧಾರಿತ ವರದಿಯನ್ನು ರಾಜ್ಯ ಬಿಜೆಪಿ ಸರ್ಕಾರ ಒಪ್ಪಿಕೊಳ್ಳಲಿ. ಕುರುಬರ ಬಗ್ಗೆ ಈಶ್ವರಪ್ಪ ಅವರಿಗೆ ಇದ್ದಕ್ಕಿದ್ದಂತೆ ಕಾಳಜಿ ಬಂದಿದೆ. ಕಾಗಿನೆಲೆ ಮಠ ಸ್ಥಾಪನೆ ಸಂದರ್ಭದಲ್ಲಿ ಈಶ್ವರಪ್ಪ ಅವರು ಎಲ್ಲಿದ್ದರು. ಆಗ ಅವರು ಪತ್ತೆಯೇ ಇರಲಿಲ್ಲ. ಈಗ ಸ್ವಾಮೀಜಿಗಳನ್ನು ಕರೆದುಕೊಂಡು ಹೋರಾಟ ನಡೆಸುತ್ತಿದ್ದಾರೆ. ಮಠದ ಉದ್ಘಾಟನಾ ಸಭೆಗೂ ಅವರು ಆಗ ಬಂದಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Also Read: ಸಿದ್ದರಾಮಯ್ಯ V/S ಈಶ್ವರಪ್ಪ; ಕುರುಬ ಸಮಾಜದ ಎಸ್ಟಿ ಮೀಸಲಾತಿ ಹೋರಾಟದ ಹಿಂದಿನ ಉದ್ದೇಶವೇನು?

ಉಡುಪಿಯ ಕನಕ ಗೋಪುರ ಕೆಡವಿದಾಗ ಈಶ್ವರಪ್ಪ ಎಲ್ಲಿ ಹೋಗಿದ್ದರು? ಯಾವ ಮೀಸಲಾತಿ ಪರ ಅವರು ಹೋರಾಟ ಮಾಡಿದ್ದಾರೆ? ರಾಜ್ಯ ಸಭಾ ಸದಸ್ಯರಾಗಿದ್ದ ರಾಮಾ ಜೋಯಿಸರು ಹಿಂದುಳಿದ ವರ್ಗದವರ ಮೀಸಲು ವಿರೋಧಿಸಿದಾಗ ಎಲ್ಲಿದ್ದರು. ಬಿಜೆಪಿಯಲ್ಲಿ ಆಗ ಈಶ್ವರಪ್ಪ ಇದ್ದರಲ್ಲವೇ? ಏಕೆ ವಿರೋಧ ಮಾಡಲಿಲ್ಲ? ಈಗ ಇದ್ದಕ್ಕಿಂದ್ದರೆ ಈಶ್ವರಪ್ಪ ಅವರಿಗೆ ಕುರುಬರ ಮೇಲೆ ಪ್ರೀತಿ ಬಂದಿದೆ. ಅವರು ಹೋರಾಟ ಮಾಡಲಿ. ಬೇಡ ಎನ್ನುವುದಿಲ್ಲ. ಮೊದಲು ಬೀದರ್, ಕಲಬರಗಿ, ಯಾದಗಿರಿಯ ಗೊಂಡ, ರಾಜಗೊಂಡ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕುರಿತು ಆದೇಶ ಜಾರಿ ಮಾಡಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

ಈಶ್ವರಪ್ಪ ಅವರು ಎಂದೂ ಮೀಸಲಾತಿ ಪರ ಹೋರಾಟ ಮಾಡಿದವರಲ್ಲ. ಸದನದಲ್ಲಿಯೂ ಧ್ವನಿ ಎತ್ತಿದವರಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಈಶ್ವರಪ್ಪ ಅವರು ಎಲ್ಲಿ ಬಿಟ್ಟರು? ಹೀಗೆ ಸ್ವಾರ್ಥಕ್ಕಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್ಎಸ್ ನವರು ಈಶ್ವರಪ್ಪ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಆರ್ ಎಸ್ ಎಸ್ ಕೈವಾಡದ ಬಗ್ಗೆ ನನಗೆ ಗೊತ್ತಿರಲಿಲ್ಲ. ಈಶ್ವರಪ್ಪ ಅವರೇ ಹೇಳಿದ ಮೇಲೆ ನನಗೂ ತಿಳಿದದ್ದು. ಈಶ್ವರಪ್ಪ ಅವರು ಸ್ವಂತ ಬುದ್ಧಿಯಿಂದ ಹೋರಾಟ ಶುರು ಮಾಡಿದ್ದಲ್ಲ, ಆರ್ ಎಸ್ ಎಸ್, ಬಿಜೆಪಿಯವರ ಹುನ್ನಾರವಿದೆ. ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ವಿರೋಧಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮಧುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ – ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ. ಲವ್ ಜಿಹಾದ್ ನಿಷೇಧದಂತಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ ಎಂದು ಸ್ವತಃ ಕಾನೂನು ತಜ್ಞರೂ ಆಗಿರುವ ಸಿದ್ದರಾಮಯ್ಯ ಹೇಳಿದ್ದಾರೆ.

ನನ್ನನ್ನು ಕಾಂಗ್ರೆಸ್ ಸೇರಿಸಿದ್ದು ವಿಶ್ವನಾಥ್ ಎಂಬುದೇ ಶುದ್ಧ ಸುಳ್ಳು. ನನ್ನನ್ನು ಕರೆದುಕೊಂಡು ಹೋಗಿ ಕಾಂಗ್ರೆಸ್‌ ‌ನ ಯಾವ ನಾಯಕರನ್ನು ಭೇಟಿ ಮಾಡಿಸಿದ್ದರು ಅಂತ ವಿಶ್ವನಾಥ್ ಅವರನ್ನೇ ಕೇಳಿ. ನಾನು ಕಾಂಗ್ರೆಸ್ ಸೇರಲು ಪಿರನ್ ಹಾಗೂ ಅಹಮದ್ ಪಟೇಲ್ ಕಾರಣರೇ ಹೊರತು ಕರ್ನಾಟಕದ ಯಾವೊಬ್ಬ ನಾಯಕರಲ್ಲ. ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಅಷ್ಟೊಂದು ಪ್ರಭಾವಶಾಲಿಯಾಗಿದ್ದರೆ ಅವರು ಯಾಕೆ ಕಾಂಗ್ರೆಸ್ ಬಿಟ್ಟರಂತೆ? ಅವರ ಈಗಿನ ಮಾತು ಮತ್ತು ನಡವಳಿಕೆಗಳನ್ನು ನೋಡಿದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದನ್ನು ಒಳಗಿಂದೊಳಗೆ ವಿರೋಧಿಸಿರಬಹುದೇ ಎಂಬ ಸಂಶಯ ನನ್ನನ್ನು ಕಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಸೇರಿದಂತೆ ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರು ನಮ್ಮಲ್ಲಿರುವ ಮಾನವೀಯತೆಯನ್ನು ನೋಡಿ ಕಲಿಯಬೇಕು. ಡಿ.ಕೆ ಶಿವಕುಮಾರ್ ಅವರಿಗೆ ನೀವು ಕಿವಿಮಾತು ಹೇಳುವುದೇನೋ ಸರಿ, ಆದರೆ ಅವರು ಯಾವಾಗ ಮಾನವೀಯತೆ, ಮನುಷ್ಯತ್ವವನ್ನು ಕಲಿಯುವುದು? ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕರು ಈ ಕೆಲಸ ಮಾಡಿದ್ದಾರೆ? ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಹಸು- ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಏನು ಮಾಡಬೇಕು? ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೇ? ಎಂದು ಅವರು ಪ್ರಶ್ನಿಸಿದ್ದಾರೆ.

Tags: RSSsiddaramaiahsocial Justice
Previous Post

ನನ್ನ ಸೋಲಿಗೆ CP ಯೋಗೇಶ್ವರ್‌ ಹಣ ಲಪಟಾಯಿಸಿದ್ದೇ‌ ಕಾರಣ –ಎಚ್ ವಿಶ್ವನಾಥ್

Next Post

ಕರ್ನಾಟಕ ಬಂದ್‌ ಯಶಸ್ವಿಗೊಳಿಸುವಂತೆ ಕರೆ ನೀಡಿದ ಕರವೇ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಕರ್ನಾಟಕ ಬಂದ್‌ ಯಶಸ್ವಿಗೊಳಿಸುವಂತೆ ಕರೆ ನೀಡಿದ ಕರವೇ

ಕರ್ನಾಟಕ ಬಂದ್‌ ಯಶಸ್ವಿಗೊಳಿಸುವಂತೆ ಕರೆ ನೀಡಿದ ಕರವೇ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada