ಕರೋನಾ ಸೋಂಕಿಗೆ ತುತ್ತಾಗಿ ಮಣಿಪಾಲ ಆಸ್ಪತ್ರೆಗೆ ಸಿಎಂ ಯಡಿಯೂರಪ್ಪ ದಾಖಲಾಗಿದ್ದರೂ, ಅಲ್ಲಿಂದಲೇ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ತಮ್ಮ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ ನಂತರ ತಮ್ಮ ಕೆಲಸವನ್ನು ಆಸ್ಪತ್ರೆಯಿಂದಲೇ ಮುಂದುವರೆಸಿದ್ದಾರೆ.
ಸೋಮವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ, ವೈದ್ಯರು ಪರೀಕ್ಷಿಸಿ ತಮ್ಮ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಹಾಗಾಗಿ ಸರ್ಕಾರದ ಕೆಲಸ ಕಾರ್ಯಗಳನ್ನು ಇಲ್ಲಿಂದಲೇ ನಿರ್ವಹಿಸುತ್ತಿದ್ದೇನೆ ಎಂದಿದ್ದರು.
ಈಗ ಯಡಿಯೂರಪ್ಪ ಅವರು ಫೈಲುಗಳನ್ನು ತಿರುವಿ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.