• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಈ ಬಾರಿಯ ದಸರಾ ಆಚರಣೆ ಅರಮನೆಗೆ ಮಾತ್ರ ಸೀಮಿತ

by
September 8, 2020
in ಕರ್ನಾಟಕ
0
ಈ ಬಾರಿಯ ದಸರಾ ಆಚರಣೆ ಅರಮನೆಗೆ ಮಾತ್ರ ಸೀಮಿತ
Share on WhatsAppShare on FacebookShare on Telegram

ಕೋವಿಡ್-19 ಸಾಂಕ್ರಮಿಕ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾ ವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಿದೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಕರೊನಾ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಆಹಾರ ಮೇಳ, ಕ್ರೀಡೆ, ಯುವದಸರಾ, ಸಾಂಸ್ಕೃತಿಕ ದಸರ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು.

ಮೊದಲೆಲ್ಲ 10-12 ಆನೆಗಳು ಭಾಗವಹಿಸುತಿದ್ದ ಅದ್ದೂರಿ ನಾಡಹಬ್ಬದ ಆಚರಣೆಯಲ್ಲಿ ಈ ಬಾರಿ ಗಜಪಡೆಯನ್ನು ಕನಿಷ್ಟ 5 ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಯಿತು.

ಕೋವಿಡ್-19 ಹಿನ್ನೆಲೆಯಲ್ಲಿ, ಸಾಂಪ್ರದಾಯಿಕ ಆಚರಣೆ ಕೈಬಿಡದೆ, ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗಳೊಂದಿಗೆ, ಈ ಬಾರಿ ನಾಡಹಬ್ಬ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಇಂದು ನಡೆದ ಉನ್ನತಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಭೆಯಲ್ಲಿ ಉಪಮುಖ್ಯಮಂತ್ರಿಗಳು, ಸಚಿವರುಗಳು, ಶಾಸಕರು, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. pic.twitter.com/Jc02sLLVpA

— B.S. Yediyurappa (@BSYBJP) September 8, 2020


ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ ಗಾಗಿ ಶ್ರಮಿಸುತ್ತಿರುವ ಕರೋನ ವಾರಿಯರ್ಸ್‌ ಅವರಿಂದ ನೆರವೇರಿಸಲು ತೀರ್ಮಾನಿಸಲಾಯಿತು. ದಸರಾ ಆಚರಣೆಗೆ 10 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುವುದಲ್ಲದೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು ಮತ್ತು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದು ಎಂದು ತೀರ್ಮಾನಿಸಲಾಯಿತು. ಅಲ್ಲದೇ ಪ್ರಧಾನಮಂತ್ರಿಗಳ ಆತ್ಮನಿರ್ಭರ್ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.

#ಬೆಂಗಳೂರು: #ಮೈಸೂರು #ದಸರಾ ಹಬ್ಬದ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು.#Bengaluru: #Karnataka CM BS Yediyurappa held a high-level meeting on #Mysuru #Dasara festival, today@CMofKarnataka @BSYBJP #mysurudasara #kannada #navratri #mysoredasara pic.twitter.com/VJoWyRS8Sn

— Pratidhvani (@PratidhvaniNews) September 8, 2020


ADVERTISEMENT

ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ: ಸಿ.ಎಸ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್ ಮತ್ತು ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮೈಸೂರು ಜಿಲ್ಲಾಧಿಕಾರಿ ಬಿ ಶರತ್‌ ಉಪಸ್ಥಿತರಿದ್ದರು.

Tags: ನವರಾತ್ರಿನಾಡ ಹಬ್ಬಮೈಸೂರುಮೈಸೂರು ದಸರಾ
Previous Post

ಯಲಹಂಕ ಮೇಲ್ಸೇತುವೆ: ಕನ್ನಡ ಹೋರಾಟಗಾರರ ಬಂಧನ, ಸರ್ಕಾರದ ವಿರುದ್ಧ ಹೆಚ್ಚಾದ ಆಕ್ರೋಶ

Next Post

ನೆರೆ ಪರಿಹಾರ; ಈ ಬಾರಿಯಾದರೂ ರಾಜ್ಯಕ್ಕೆ ನ್ಯಾಯ ಸಿಗುವುದೇ..?

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ನೆರೆ ಪರಿಹಾರ; ಈ ಬಾರಿಯಾದರೂ ರಾಜ್ಯಕ್ಕೆ ನ್ಯಾಯ ಸಿಗುವುದೇ..?

ನೆರೆ ಪರಿಹಾರ; ಈ ಬಾರಿಯಾದರೂ ರಾಜ್ಯಕ್ಕೆ ನ್ಯಾಯ ಸಿಗುವುದೇ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada