• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉತ್ತರ ಕರ್ನಾಟಕ ನೆರೆ: ಕೇಂದ್ರದ ಭೇಟಿಗೆ ಸರ್ವಪಕ್ಷ ನಿಯೋಗ ರೂಪಿಸಲು ಸಿದ್ದರಾಮಯ್ಯ ಆಗ್ರಹ

by
October 29, 2020
in ಕರ್ನಾಟಕ
0
ಉತ್ತರ ಕರ್ನಾಟಕ ನೆರೆ: ಕೇಂದ್ರದ ಭೇಟಿಗೆ ಸರ್ವಪಕ್ಷ ನಿಯೋಗ ರೂಪಿಸಲು ಸಿದ್ದರಾಮಯ್ಯ ಆಗ್ರಹ
Share on WhatsAppShare on FacebookShare on Telegram

ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು, ನಮ್ಮ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿರುವ ಸಿದ್ದರಾಮಯ್ಯ, ಅಕ್ಟೋಬರ್ 19 ಮತ್ತು 20ರಂದು ಬಾದಾಮಿ ಹಾಗೂ 25 ಮತ್ತು 26ರಂದು ಬೀದರ್, ಕಲ್ಬುರ್ಗಿ, ಯಾದಗಿರಿ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ನಾನು ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಕಣ್ಣಾರೆ ನೋಡಿದ್ದೇನೆ, ಸಂತ್ರಸ್ತರ ಕಷ್ಟಗಳನ್ನು ಕೇಳಿದ್ದೇನೆ. ಅಲ್ಲಿನ ನಷ್ಟ ಹಿಂದಿನ ಬಾರಿಗಿಂತ ದುಪ್ಪಟ್ಟಾಗಿದೆ, ಪರಿಸ್ಥಿತಿ ಅಷ್ಟೇ ಗಂಭೀರವಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.30 ಕ್ಕಿಂತ ಅಧಿಕ ಭಿತ್ತನೆಯಾಗಿದೆ. ಮಳೆ ಮತ್ತು ಪ್ರವಾಹದಿಂದಾಗಿ ಸಾವಿರಾರು ಎಕರೆ ಭೂಮಿಯಲ್ಲಿ ಬೆಳೆದ ಶೇಂಗಾ, ಈರುಳ್ಳಿ, ಅಡಿಕೆ, ಭತ್ತ, ಕಾಫಿ, ಮೆಣಸು, ಜೋಳ, ದ್ವಿದಳ ಧಾನ್ಯಗಳು, ಹತ್ತಿ, ರಾಗಿ, ಸಜ್ಜೆ ಮುಂತಾದ ಬೆಳೆಗಳೆಲ್ಲ ನಾಶವಾಗಿವೆ ಎಂದು ಹೇಳಿದ್ದಾರೆ.

Also Read: GST ಪಾಲು ಕೇಳಿ, ಧೈರ್ಯವಿಲ್ಲದಿದ್ದರೆ ನಮ್ಮನ್ನು ಕರೆಯಿರಿ; BSY ಗೆ ಸಿದ್ದರಾಮಯ್ಯ ಸವಾಲು

ಕಳೆದ ವರ್ಷ ಬಿದ್ದ 1ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ಮನವಿ ಸಲ್ಲಿಸಲಾಗಿದೆ. ಆದರೆ ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಪೂರ್ಣ ಹಾನಿಯಾದ ಮನೆಗಳಿಗೆ ರೂ.5 ಲಕ್ಷ ನೀಡುವುದಾಗಿ ಹೇಳಿ ಇದುವರೆಗೆ ಕೇವಲ ರೂ.1 ಲಕ್ಷ ಮಾತ್ರ ನೀಡಲಾಗಿದೆ. ಕೊಚ್ಚಿ ಹೋದ ಭೂಮಿಗೆ, ಕೊಳೆತು ಹೋದ ಬೆಳೆಗಳಿಗೆ ಇನ್ನೂ ಪರಿಹಾರವನ್ನೇ ನೀಡಿಲ್ಲವೆಂದು ನಾನು ಭೇಟಿಕೊಟ್ಟ ಗ್ರಾಮಗಳ ರೈತರು ಪದೇ ಪದೇ ಹೇಳುತ್ತಿದ್ದಾರೆ. ಕಳೆದ ವರ್ಷ ನದಿ ಪಾತ್ರಗಳ ಗ್ರಾಮಗಳ ಜನರು ತೀವ್ರ ನೋವು ಅನುಭವಿಸಿದರು. ಸೆಪ್ಟೆಂಬರ್ ಅಂತ್ಯದವರೆಗೆ ರಾಜ್ಯದಲ್ಲಿ 8.68 ಲಕ್ಷ ಹೆಕ್ಟೇರ್ ಕೃಷಿ ಬೆಳೆ, 0.88 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿವೆ. ಅಂದರೆ 11 ಲಕ್ಷ ಹೆಕ್ಟೇರ್ಗಳಲ್ಲಿ ಬೆಳೆದ ಬೆಳೆ ಸೆಪ್ಟೆಂಬರ್ವರೆಗೆ ಹಾನಿಯಾಗಿದೆ. ಈಗ ಅಕ್ಟೋಬರ್ ತಿಂಗಳಲ್ಲಿ ಬಿದ್ದ ಮಳೆಯಿಂದಾಗಿ ಮುಕ್ಕಾಲು ರಾಜ್ಯವೇ ಕಂಗೆಟ್ಟು ಕೂತಿದೆ ಎಂದು ಹೇಳಿದ್ದಾರೆ.

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಬೆಳೆದ ಬಹುಪಾಲು ಬೆಳೆಗಳು ಹಾನಿಗೊಳಗಾಗಿವೆ. ಜಿಲ್ಲಾಡಳಿತ ಸಂಪೂರ್ಣವಾಗಿ ಸಮೀಕ್ಷೆಯನ್ನೇ ಮಾಡಿಲ್ಲ. ಸರ್ಕಾರದ ಸಚಿವರುಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಂಪೂರ್ಣ ನಿರ್ಲಕ್ಷಿಸಿದ ಮೇಲೆ ತಹಶೀಲ್ದಾರ್, ಡಿ.ಸಿ.ಗಳು ಎಷ್ಟರ ಮಟ್ಟಿಗೆ ಜನರ ಜೊತೆ ನಿಲ್ಲಲು ಸಾಧ್ಯ? 11/12 pic.twitter.com/XMRBkiPlY0

— Siddaramaiah (@siddaramaiah) October 29, 2020


ADVERTISEMENT

ಬೀದರ್ ಜಿಲ್ಲೆಯಲ್ಲಿ ಬಿತ್ತನೆಯಾದ 3,70,982 ಹೆಕ್ಟೇರ್ಗಳಲ್ಲಿ 2,47,209 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕಲ್ಬುರ್ಗಿ ಜಿಲ್ಲೆಯಲ್ಲಿ ಒಟ್ಟು 3,44,085 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದರಲ್ಲಿ 1.12 ಲಕ್ಷ ಹೆಕ್ಟೇರ್ ತೊಗರಿ, 34 ಸಾವಿರ ಹೆಕ್ಟೇರ್ ಹತ್ತಿ ನಾಶವಾಗಿದೆ. ಬಿಜಾಪುರ ಜಿಲ್ಲೆಯಲ್ಲಿ 1,60,739 ಹೆಕ್ಟೇರ್ ಕೃಷಿ ಬೆಳೆಗಳು ಮತ್ತು 11,929 ಹೆಕ್ಟೇರ್ ತೋಟದ ಬೆಳೆಗಳು ಒಟ್ಟು 1,72,668 ಹೆಕ್ಟೇರ್ ನಾಶವಾಗಿದೆ ಎಂದು ಪ್ರಾಥಮಿಕ ಸಮೀಕ್ಷೆಗಳು ಹೇಳುತ್ತಿವೆ. ನಾನು ಭೇಟಿ ಕೊಟ್ಟಿದ್ದಾಗಲೂ ಹೊಲಗಳಲ್ಲಿ ಸುಮಾರು 2 ಅಡಿ ನೀರು ನಿಂತಿತ್ತು. ಸುಮಾರು ಒಂದು ಲಕ್ಷ ಮನೆಗಳಿಗೆ ಹಾನಿಯಾಗಿದೆ. ಗುಲ್ಬರ್ಗ ಜಿಲ್ಲಾಧಿಕಾರಿ ಸಮೀಕ್ಷೆ ಪ್ರಕಾರ ಅಲ್ಲಿ ಸುಮಾರು 20,000 ಮನೆಗಳಿಗೆ ಹಾನಿಯಾಗಿದೆ. ದವಸ ಧಾನ್ಯ, ಬಟ್ಟೆ ಬರೆ, ಪುಸ್ತಕ ಕೊಚ್ಚಿ ಹೋಗಿವೆ. ರಾಯಚೂರಿನಲ್ಲಿ 3 ದಿನಗಳ ಮಳೆಗೆ ಸುಮಾರು 80,000 ಹೆಕ್ಟೇರ್, ಯಾದಗಿರಿಯಲ್ಲಿ 50,000 ಹೆಕ್ಟೇರ್, ಕೊಪ್ಪಳ 8,000 ಹೆಕ್ಟೇರ್, ಬಳ್ಳಾರಿಯಲ್ಲೂ ಸಾವಿರಾರು ಹೆಕ್ಟೇರ್ ಬೆಳೆ ನಾಶವಾಗಿದೆ ಎಂದು ಸಿದ್ದರಾಮಯ್ಯ ಎಂದಿದ್ದಾರೆ.

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಬೆಳೆದ ಬಹುಪಾಲು ಬೆಳೆಗಳು ಹಾನಿಗೊಳಗಾಗಿವೆ. ಜಿಲ್ಲಾಡಳಿತ ಸಂಪೂರ್ಣವಾಗಿ ಸಮೀಕ್ಷೆಯನ್ನೇ ಮಾಡಿಲ್ಲ. ಸರ್ಕಾರದ ಸಚಿವರುಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಂಪೂರ್ಣ ನಿರ್ಲಕ್ಷಿಸಿದ ಮೇಲೆ ತಹಶೀಲ್ದಾರ್, ಡಿ.ಸಿ.ಗಳು ಎಷ್ಟರ ಮಟ್ಟಿಗೆ ಜನರ ಜೊತೆ ನಿಲ್ಲಲು ಸಾಧ್ಯ? ಎಂದು ಪ್ರಶ್ನೆ ಹಾಕಿದ ಸಿದ್ದರಾಮಯ್ಯ ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ರಾಜ್ಯದ ಜನ ಮತ್ತು ರಾಜ್ಯದ ಆಸ್ತಿಯನ್ನು ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

Tags: former chief minister Siddaramaiahಉತ್ತರ ಕರ್ನಾಟಕನೆರೆ ಪರಿಸ್ಥಿತಿಸರ್ವಪಕ್ಷ ನಿಯೋಗಸಿದ್ದರಾಮಯ್ಯ
Previous Post

ಭ್ರಷ್ಟಾಚಾರ ಪ್ರಕರಣ: CBI ತನಿಖೆ ವಿರುದ್ದ ಸುಪ್ರಿಂ ಮೆಟ್ಟಿಲೇರಿದ ಉತ್ತರಾಖಂಡ್ ಸಿಎಂ

Next Post

ಮಾನನಷ್ಟ ಪ್ರಕರಣ: ಬೇಷರತ್ ಕ್ಷಮೆ ಯಾಚಿಸಿದ ಬಿಜೆಪಿಯ ಕಪಿಲ್ ಮಿಶ್ರಾ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಮಾನನಷ್ಟ ಪ್ರಕರಣ: ಬೇಷರತ್ ಕ್ಷಮೆ ಯಾಚಿಸಿದ ಬಿಜೆಪಿಯ ಕಪಿಲ್ ಮಿಶ್ರಾ

ಮಾನನಷ್ಟ ಪ್ರಕರಣ: ಬೇಷರತ್ ಕ್ಷಮೆ ಯಾಚಿಸಿದ ಬಿಜೆಪಿಯ ಕಪಿಲ್ ಮಿಶ್ರಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada