ಆರ್ ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದ ನಂತರ ಕರ್ನಾಟಕ ಸರ್ಕಾರದ ಮಂತ್ರಿಮಂಡಲ ವಿಸ್ತರಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಉಪಚುನಾವಣೆಗಳ ನಂತರ ದೆಹಲಿಗೆ ಪ್ರಯಾಣಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕ್ಯಾಬಿನೆಟ್ ವಿಸ್ತರಣೆಯ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಈಗಾಗಲೇ ಸಚಿವ ಸಂಪುಟವನ್ನು ವಿಸ್ತರಿಸಲು ಅಥವಾ ಪುನರ್ರಚಿಸಲು ಯಡಿಯೂರಪ್ಪ ಅವರು ಸರ್ಕಾರದೊಳಗಿನ ಬಣಗಳ ಒತ್ತಡದಲ್ಲಿದ್ದಾರೆ.
ಮುಂದಿನ 15-20 ದಿನಗಳಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಲಿದ್ದಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯನ್ನು ಯಡಿಯೂರಪ್ಪ ಅಲ್ಲಗೆಳೆದಿದ್ದಾರೆ. ಉಪಚುನಾವಣೆಗಳ ಬಳಿಕ ಜೆಡಿಎಸ್ ಮತ್ತು ಕಾಂಗ್ರೆಸ್‌ನಲ್ಲಿ ಮಾತ್ರ ಬದಲಾವಣೆಗಳಾಗಲಿದೆಯೇ ಹೊರತು ರಾಜ್ಯ ಸರ್ಕಾರದಲ್ಲಿ ಅಲ್ಲ ಎಂದು ಹೇಳಿದ್ದಾರೆ.

ಇನ್ನು, ಉಪಚುನಾವಣೆಯಲ್ಲಿ ಪ್ರಚಾರದಲ್ಲಿ ಇದುವರೆಗೂ ಭಾಗಿಯಾಗದ ಕುರಿತು ಮಾತನಾಡಿದ ಮುಖ್ಯಮಂತ್ರಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಪ್ರತಿಪಕ್ಷದ ಎಲ್ಲ ಪ್ರಮುಖ ನಾಯಕರು ಭಾಗವಹಿಸಿದ್ದಾರೆ. ಪ್ರತಿಪಕ್ಷ ನಾಯಕರು ಪ್ರಚಾರದಲ್ಲಿ ಭಾಗಿಯಾಗಿ ತಾನು ಭಾಗಿಯಾಗದಿದ್ದರೆ ಅದು ತಪ್ಪು ಸಂದೇಶ ಹರಡಬಹುದು ಹಾಗಾಗಿ ತಾನೂ ಪ್ರಚಾರದಲ್ಲಿ ತೊಡಗಿದ್ದೇನೆಂದು ಯಡಿಯೂರಪ್ಪ ತಿಳಿಸಿದ್ದಾರೆ.












