• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎಲ್ಲ ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು – ಸಿದ್ದರಾಮಯ್ಯ

by
October 18, 2020
in ಕರ್ನಾಟಕ
0
ಎಲ್ಲ ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು - ಸಿದ್ದರಾಮಯ್ಯ
Share on WhatsAppShare on FacebookShare on Telegram

ಕುರುಬರು ಸೇರಿದಂತೆ ಪರಿಶಿಷ್ಟ ಪಂಗಡದ ಗುಣಲಕ್ಷಣಗಳನ್ನು ಹೊಂದಿರುವ ಎಲ್ಲ ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬುದು ನನ್ನ ಅಭಿಪ್ರಾಯ ಎಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡು ಜಾರಿಗೆ ತರುವ ಜವಾಬ್ದಾರಿಯನ್ನು ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ವಹಿಸಿಕೊಂಡಿದ್ದಾರೆ. ಅವರ ಮಾತಿನ ಮೇಲೆ ವಿಶ್ವಾಸ ಇಟ್ಟಿದ್ದೇವೆ, ಇದಕ್ಕಾಗಿ ಹೋರಾಟ ಮಾಡುವ ಅಗತ್ಯ ಬರಲಾರದೆಂದು ನಂಬಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳನ್ನು ನಾವು ಭೇಟಿ ಮಾಡಿ ಒತ್ತಾಯಿಸಲಿದ್ದೇವೆ. ಇದರ ಜೊತೆಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ಪುನರ್ರಚಿಸಿ ಅಧ್ಯಕ್ಷರನ್ನು ನೇಮಕ ಮಾಡಲು ಆಗ್ರಹಿಸುತ್ತೇವೆ. ಈ ಸಮೀಕ್ಷೆ ಹಿಂದುಳಿದ ಜಾತಿಗಳಿಗೆ ಸೀಮಿತವಾದುದಲ್ಲ. ಅದು ಸಮಾಜದಲ್ಲಿರುವ ಎಲ್ಲ ಜಾತಿಗಳ ಸಮೀಕ್ಷೆ. ಅದನ್ನು ಒಪ್ಪಿಕೊಂಡು ವೈಜ್ಞಾನಿಕ ರೀತಿಯಲ್ಲಿ ಜಾರಿಗೆ ತಂದರೆ ಎಲ್ಲ ಜಾತಿ-ಧರ್ಮಗಳಿಗೂ ಒಳಿತಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಸಮೀಕ್ಷೆಗೆ ಚಾಲನೆ ನೀಡಿದ್ದೇ ನಮ್ಮ ಸರ್ಕಾರ. ಆದರೆ ನಮ್ಮ ಆಡಳಿತಾವಧಿಯಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೆ ನಾವೇ ಅನುಷ್ಠಾನಕ್ಕೆ ತರುತ್ತಿದ್ದೆವು. ಪೂರ್ಣಗೊಂಡಿಲ್ಲದ ಕಾರಣ ನಮಗೆ ಅದನ್ನು ಅನುಷ್ಠಾನಗೊಳಿಸಲು ಸಾಧ್ಯವಾಗಿರಲಿಲ್ಲ ಎಂದ ಸಿದ್ದರಾಮಯ್ಯ, ಕುರುಬರು ಮಾತ್ರವಲ್ಲ ಪರಿಶಿಷ್ಟ ಪಂಗಡದ ಗುಣಲಕ್ಷಣಗಳನ್ನು ಹೊಂದಿರುವ ಎಲ್ಲ ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬುದು ನನ್ನ ಅಭಿಪ್ರಾಯ. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರ ಗಂಗಾಮತಸ್ಥರು, ಗೊಲ್ಲರು ಮತ್ತು ಗೊಂಡ-ರಾಜಾಗೊಂಡ ಸಮುದಾಯಗಳನ್ನು ಎಸ್‌.ಟಿ ಗೆ ಸೇರಿಸಬೇಕೆಂದು ಶಿಫಾರಸು ಮಾಡಿದ್ದೆ. ಗೊಲ್ಲರು, ಗಂಗಾಮತಸ್ಥರು, ಗೊಂಡರಂತೆ ಕುರುಬರು ಕೂಡಾ ತಮ್ಮನ್ನು ಎಸ್.ಟಿ ಗೆ ಸೇರಿಸಬೇಕೆಂದು ಕೇಳುತ್ತಾ ಬಂದಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಕುರುಬರು ಎಸ್.ಟಿ ಗೆ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್.ಟಿ ಗೆ ಸೇರಿಸಬೇಕೆಂದು ಕುರುಬರು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಸಮಾಜದ ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಿದಾಗಲೇ ಸಾಮಾಜಿಕ ನ್ಯಾಯ ಸಂಪೂರ್ಣವಾಗಿ ಅನುಷ್ಠಾನಗೊಳ್ಳಲು ಸಾಧ್ಯ. ಇದೇ ನಮ್ಮೆಲ್ಲರ ಒಮ್ಮತದ ಬೇಡಿಕೆಯಾಗಿದೆ. 8/8 #ಮಾಧ್ಯಮಹೇಳಿಕೆ

— Siddaramaiah (@siddaramaiah) October 18, 2020


ADVERTISEMENT

ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಗೆ ವಿರೋಧ ಇಲ್ಲ. ನಮ್ಮ ಸರ್ಕಾರ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಜಾರಿಗೊಳಿಸಿದಾಗ ಪರಿಶಿಷ್ಟ ಜಾತಿಯವರಿಗೆ 17.1% ಮತ್ತು ಪರಿಶಿಷ್ಟ ಪಂಗಡಕ್ಕೆ 6.95% ನಷ್ಟು ಮೀಸಲಾತಿ ಕಲ್ಪಿಸಿದ್ದೆವು. ಆದ್ದರಿಂದ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 7.5%ಕ್ಕೆ ಹೆಚ್ಚಿಸುವುದು ನ್ಯಾಯಸಮ್ಮತವಾಗಿದೆ.

ಸಮಾಜದ ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಿದಾಗಲೇ ಸಾಮಾಜಿಕ ನ್ಯಾಯ ಸಂಪೂರ್ಣವಾಗಿ ಅನುಷ್ಠಾನಗೊಳ್ಳಲು ಸಾಧ್ಯ. ಇದೇ ನಮ್ಮೆಲ್ಲರ ಒಮ್ಮತದ ಬೇಡಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

Tags: backward castesscheduled tribessiddaramaiah
Previous Post

ಜೆಡಿಎಸ್‌ ಮುಗಿಸುವುದೇ ಕಾಂಗ್ರೆಸ್‌ ನಾಯಕರ ಅಜೆಂಡಾ: ಎಚ್‌ ಡಿ ಕುಮಾರಸ್ವಾಮಿ

Next Post

ಕರ್ನಾಟಕ ನೆರೆ ಪರಿಸ್ಥಿತಿ; ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ- ಕುರಬೂರು ಶಾಂತಕುಮಾರ್

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಕರ್ನಾಟಕ ನೆರೆ ಪರಿಸ್ಥಿತಿ; ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ- ಕುರಬೂರು ಶಾಂತಕುಮಾರ್

ಕರ್ನಾಟಕ ನೆರೆ ಪರಿಸ್ಥಿತಿ; ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ- ಕುರಬೂರು ಶಾಂತಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada