ರಾಜ್ಯದಲ್ಲಿ ಕರೋನಾ ಸೋಂಕು ದಿನದಿಂದ ದಿನಕ್ಕೆ ತನ್ನ ಸಂಖ್ಯೆಯನ್ನು ವೃಧ್ದಿಸಿಕೊಳ್ಳುತ್ತಲೇ ಇದೆ. ಮೇ 08 ರಂದು ರಾಜ್ಯದ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ನೀಡಿದ ಕರೋನಾ ಸೋಂಕಿನ ಕುರಿತಾದ ಮಾಹಿತಿ ಪ್ರಕಾರ ರಾಜ್ಯದಲ್ಲಿ 48 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿದೆ.
ರಾಜ್ಯದಲ್ಲಿ 48 ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 753 ತಲುಪಿದೆ. ಇದುವರೆಗೂ 376 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು ಸಾವಿನ ಪ್ರಮಾಣ 30 ತಲುಪಿದೆ. ಸಕ್ರಿಯವಾಗಿರುವ 346 ಪ್ರಕರಣದಲ್ಲಿ 340 ವ್ಯಕ್ತಿಗಳು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 06 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೇ 07 ಸಂಜೆ 05 ರಿಂದ ಮೇ 08 ರ ಸಂಜೆ 05 ರವರೆಗೆ ಪತ್ತೆಯಾದ ಪ್ರಕರಣದಲ್ಲಿ ದಾವಣಗೆರೆಯಲ್ಲಿ 14 ಪ್ರಕರಣಗಳು ದಾಖಲಾಗಿದ್ದು, ಉತ್ತರ ಕನ್ನಡದಲ್ಲಿ 12, ಬೆಳಗಾವಿಯಲ್ಲಿ 11, ಬೆಂಗಳೂರು ನಗರದಲ್ಲಿ 07 , ಚಿತ್ರದುರ್ಗದಲ್ಲಿ 3 ಹಾಗೂ ಬಳ್ಳಾರಿಯಲ್ಲಿ 01 ಪ್ರಕರಣಗಳು ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.