• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ನೂತನ ಮಾರ್ಗಸೂಚಿ

by
June 27, 2020
in ಕರ್ನಾಟಕ
0
ಕರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ನೂತನ ಮಾರ್ಗಸೂಚಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಲವು ನಿರ್ಣಯ ತೆಗೆದುಕೊಳ್ಳಲಾಗಿದೆ.

ADVERTISEMENT

ನಿರ್ಣಯದಂತೆ ಕೋವಿಡ್ 19 ಸೋಂಕಿತ ರೋಗಿಗಳನ್ನು ಶೀಘ್ರವಾಗಿ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಲು (ಸೆಂಟ್ರಲೈಜ್ ಬೆಡ್ ಅಲೋಕೇಷನ್ ಸಿಸ್ಟಂ) ತಂತ್ರಾಂಶವನ್ನು ಜಾರಿಗೊಳಿಸಲಾಗುತ್ತದೆ.

ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ಆಸ್ಪತ್ರೆಗೆ ಸಾಗಿಸಲು ಅಂಬ್ಯುಲೆನ್ಸ್ ಗಳನ್ನು 250ಕ್ಕೆ ಹೆಚ್ಚಿಸಲು ಮತ್ತು ಕೋವಿಡ್‌ನಿಂದ ಮೃತರಾದ ದೇಹಗಳನ್ನು ಸಾಗಿಸಲು ಪ್ರತ್ಯೇಕ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತದೆ. ಆಂಬ್ಯುಲೆನ್ಸ್ ಇರುವ ಸ್ಥಳವನ್ನು ಗುರುತಿಸಲು ಮತ್ತು ಅವುಗಳ ಚಲನವಲನಗಳ ಸಲುವಾಗಿ ಪೊಲೀಸ್ ಕಂಟ್ರೋಲ್ ರೂಂ ವೈರ್‌ಲೆಸ್ ಸೇವೆಯನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

ಕೋವಿಡ್ 19 ರ ನಿಯಂತ್ರಣದಲ್ಲಿ ಕೆಲಸ ಮಾಡುವ ಎಲ್ಲಾ ನೋಡಲ್ ಅಧಿಕಾರಿಗಳ ವಿವರಗಳನ್ನು ಪತ್ರಿಕೆಗಳ ಜಾಹೀರಾತು ಮೂಲಕ ಸಾರ್ವಜನಿಕರಿಗೆ ಪ್ರಚುರಪಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಅಲ್ಲದೆ ಬಿಬಿಎಂಪಿ ಕೇಂದ್ರ ಕಚೇರಿ ಹಾಗೂ ಆಯುಕ್ತರ ಮೇಲೆ ಇರುವ ಕೆಲಸದ ಹೊರೆಯನ್ನು ಕಡಿಮೆ ಗೊಳಿಸಲು ಬಿಬಿಎಂಪಿ ಯಲ್ಲಿ 8 ವಲಯಗಳ ಜಂಟಿ ಆಯುಕ್ತರಿಗೆ ಹೆಚ್ಚಿನ ಜವಾಬ್ದಾರಿ ಹಾಗೂ ಕೆಲಸ ಗಳನ್ನು ನೀಡಲು ಮತ್ತು ಅವರ ಜೊತೆ ಕೆಲಸ ಮಾಡಲು ಕೆಎಎಸ್ ಅಧಿಕಾರಿಗಳನ್ನು ನಿಯೋಜಿಸುವಂತೆ ನಿರ್ಧರಿಸಲಾಗಿದೆ.

ವೈದ್ಯರ ಕೊರತೆ ನೀಗಿಸಲು ಕಾರ್ಮಿಕ ಇಲಾಖೆಯಿಂದ ನೇಮಕವಾಗಿರುವ 180 ಎಎಸ್‌ಐ ವೈದ್ಯರನ್ನು ಕೋವಿಡ್ ಕರ್ತವ್ಯಕ್ಕೆ ಬಳಸಿಕೊಳ್ಳಲು ಮತ್ತು ಪರೀಕಾರ್ತಿ ತಹಶೀಲ್ದಾರ್‌ಗಳನ್ನು ಕೋವಿಡ್ ಆಸ್ಪತ್ರೆಗಳು/ಕೇರ್ ಸೆಂಟರ್‌ಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ಹಾಕಲು ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಲಭ್ಯವಿರುವ ಕಲ್ಯಾಣ ಮಂಟಪಗಳು, ಹಾಸ್ಟೆಲ್‌ಗಳು ಹಾಗೂ ಇನ್ನಿತರೆ ಸಂಸ್ಥೆಗಳನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ಮೀಸಲಿಡಲು ಹಾಗೂ ರೈಲ್ವೆ ಇಲಾಖೆಯಿಂದ ಬೆಡ್‌ಗಳಿರುವ ಕೋಚ್ ಪಡೆಯಲು ಅಗತ್ಯ ಇರುವ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಕೋವಿಡ್‌ನಿಂದ ಮೃತರಾದವರ ಅಂತ್ಯಕ್ರಿಯೆಯನ್ನು ನಡೆಸಲು ಪ್ರತ್ಯೇಕ ತಂಡ ಗಳನ್ನು ರಚಿಸುವುದು ಹಾಗೂ ಅಂತ್ಯಕ್ರಿಯೆ ಸಲುವಾಗಿ ಇನ್ನೂ ಹೆಚ್ಚಿನ ಜಾಗಗಳನ್ನು ಗುರುತಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಮೆಡಿಕಲ್ ಕಾಲೇಜ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‌‌‌‌‌ಗಳ ಪೈಕಿ ಶೇ.50 ರಷ್ಟನ್ನು ಕೋವಿಡ್ ರೋಗಿಗಳ ಸಲುವಾಗಿ ಮೀಸಲಿಡಲು ಬಿಬಿಎಂಪಿ ಆಯುಕ್ತರಿಗೆ ನಿರ್ದೇಶಿಸಲಾಗಿದೆ.

Previous Post

ಪತಂಜಲಿ ಕೊರೊನಿಲ್ ಔಷಧ: ಬಾಬಾ ರಾಮ್‌ದೇವ್ ವಿರುದ್ದ FIR ದಾಖಲು

Next Post

ದೆಹಲಿ ಗಲಭೆ: ಶಾಹೀದ್ ಮೃತದೇಹ ಬಯಲು ಮಾಡಿತ್ತು ಪೊಲೀಸರ ನಿಜ ಬಣ್ಣ- Part2

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ದೆಹಲಿ ಗಲಭೆ: ಶಾಹೀದ್ ಮೃತದೇಹ ಬಯಲು ಮಾಡಿತ್ತು ಪೊಲೀಸರ ನಿಜ ಬಣ್ಣ- Part2

ದೆಹಲಿ ಗಲಭೆ: ಶಾಹೀದ್ ಮೃತದೇಹ ಬಯಲು ಮಾಡಿತ್ತು ಪೊಲೀಸರ ನಿಜ ಬಣ್ಣ- Part2

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada