ತಮಿಳುನಾಡು ಡಿಎಂಕೆ ಶಾಸಕ ಜೆ ಅನ್ಬಳಗನ್ ಇಂದು ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಚೈನ್ನೈ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್-19 ಚಿಕಿತ್ಸೆ ಪಡೆಯುತ್ತಿದ್ದ ಶಾಸಕ ಅವರ 62ನೇ ಹುಟ್ಟಿದ ಹಬ್ಬದಂದೇ (ಜೂನ್ 10) ಮೃತಪಟ್ಟಿದ್ದಾರೆ.
ತಮಿಳುನಾಡಿನ ಪ್ರಭಾವಿ ರಾಜಕಾರಣಿ ಜೂನ್ 2 ರಂದು ಕೋವಿಡ್ – 19 ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ರಾತ್ರಿ ಶಾಸಕರ ಆರೋಗ್ಯದಲ್ಲಿ ತೀವ್ರ ಹದಗೆಟ್ಟಿದ್ದು , ಅವರನ್ನು ಉಳಿಸಿಕೊಳ್ಳಲು ನಮ್ಮಿಂದ ಸಾಧ್ಯವಾಗಿಲ್ಲ ಎಂದು ಚಿಕಿತ್ಸೆ ನೀಡಿದ ಹಿರಿಯ ವೈದ್ಯರು ಹೇಳಿದ್ದಾರೆ.

ಶಾಸಕರು ಕರೋನಾ ಸೋಂಕಿಗೆ ತುತ್ತಾಗಿಗಿ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು. ವೆಂಟಿಲೇಟರ್ ಮೂಲಕ ಕೃತಕ ಉಸಿರಾಟ ನೀಡಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪ್ರಸ್ತುತ ಚಿಪಾಕ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಜೆ ಅನ್ಬಳಗನ್ 3 ಬಾರಿ ಶಾಸಕರಾಗಿದ್ದಾರೆ. ಬಡವರಿಗೆ ಆಹಾರ ಕಿಟ್ ನೀಡುವ ಸಂಧರ್ಭದಲ್ಲಿ ಸಾಂಕ್ರಾಮಿಕ ಕರೋನಾ ಸೋಂಕಿತ ವ್ಯಕ್ತಿಯೊಂದಿಗೆ ಶಾಸಕರು ಸಂಪರ್ಕಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಶಾಸಕರ ಕುಟುಂಬಸ್ಥರಲ್ಲೂ ಕರೋನಾ ಸೋಂಕು ಪತ್ತೆಯಾಗಿದ್ದು, ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದಲ್ಲಿ ಕರೋನಾ ಸೋಂಕಿಗೆ ಬಲಿಯಾದ ಮೊದಲ ಶಾಸಕರಾಗಿದ್ದಾರೆ.






