ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜುಲೈ 1 ರಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ಕಳೆದ 24 ಗಂಟೆಗಳಲ್ಲಿ 1272 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಒಟ್ಟು ಕಂಡು ಬಂದ ಕರೋನಾ ಸೋಂಕಿತರ ಸಂಖ್ಯೆ 16,514 ಕ್ಕೇರಿದೆ.
ಬೆಂಗಳೂರು ಒಂದರಲ್ಲೇ 735 ಕರೋನಾ ಸೋಂಕು ಪತ್ತೆಯಾಗಿದ್ದು, ರಾಜಧಾನಿಯಲ್ಲಿ ಕರೋನಾತಂಕ ಇನ್ನಷ್ಟು ಹೆಚ್ಚಾಗುವಂತೆ ಮಾಡಿದೆ.
ಇಂದು 145 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ರಾಜ್ಯದಲ್ಲಿ 8063 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಇತ್ತೀಚಿಗಿನ ವರದಿಗಳಲ್ಲಿ ರಾಜ್ಯದಲ್ಲಿ ಕರೋನಾ ಸೋಂಕು ತೀವ್ರವಾಗಿ ಹಬ್ಬುತ್ತಿರುವುದು ಸ್ಪಷ್ಟವಾಗುತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರವು ಬೆಡ್ಗಳನ್ನು ಹೊಂದಿಸಲು ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ಗಳ ವ್ಯವಸ್ಥೆ ಮಾಡಲು ಸರ್ಕಾರವು ನಿರ್ಧರಿಸಿದ್ದು ಈ ಕುರಿತಾಗಿ ಆದೇಶವನ್ನೂ ಹೊರಡಿಸಲಾಗಿದೆ.
ಇನ್ನು ಭಾರತದಲ್ಲಿ 18,653 ಹೊಸ ಪ್ರಕರಣಗಳು ಕಂಡುಬಂದಿದ್ದು, ಭಾರತದಲ್ಲಿ ಕಂಡುಬಂದಿರುವ ಪ್ರಕರಣಗಳ 5,85,493 ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 13,157 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು 3,47,979 ಮಂದಿ ಸೋಂಕಿನಿಂದ ಚೇತರಿಕೊಂಡಿದ್ದಾರೆ.
ಇದುವರೆಗೂ ದೇಶದಲ್ಲಿ ಸೋಂಕಿನಿಂದಾಗಿ ಭಾರತದಲ್ಲಿ 17,400 ಮಂದಿ ಮೃತಪಟ್ಟಿದ್ದಾರೆ.