ಹೊರ ರಾಜ್ಯ ಹಾಗೂ ದೇಶಗಳಿಂದ ಪ್ರಯಾಣಿಕರು ರಾಜ್ಯಕ್ಕೆ ಬರಲು ಅನುಮತಿ ನೀಡಿದ ಬಳಿಕ ರಾಜ್ಯದಲ್ಲಿ ಕಂಡುಬರುತ್ತಿರುವ ಕರೋನಾ ಪೀಡಿತರ ಸಂಖ್ಯೆಯಲ್ಲಿ ತೀವ್ರವಾಗಿ ಏರಿಕೆ ಕಂಡಿದೆ.
ಮೇ 24 ರ ಸಂಜೆ ಆರೋಗ್ಯ ಇಲಾಖೆ ಹೊರಡಿಸಿರುವ ಮಾಧ್ಯಮ ಪ್ರಕಟನೆಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 130 ಹೊಸ ಕರೋಣ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 105 ಪ್ರಕರಣಗಳು ಅಂತರಾಜ್ಯ ಪ್ರಯಾಣಿಕರಲ್ಲಿ ಕಂಡುಬಂದಿದೆ, 2 ಪ್ರಕರಣ ವಿದೇಶದಿಂದ ಮರಳಿದವರಲ್ಲಿ ಪತ್ತೆಯಾಗಿದೆಯೆಂದು ಇಲಾಖೆ ಹೇಳಿದೆ.
ವಿಮಾನ ನಿಲ್ದಾಣದಲ್ಲಿ ಇಂದು ಒಟ್ಟು 749 ಮಂದಿ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ ಒಟ್ಟು 2,06,313 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಇದುವರೆಗೂ ರಾಜ್ಯದಲ್ಲಿ 2089 ಪ್ರಕರಣಗಳು ದಾಖಲಾಗಿದ್ದು, 654 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸಕ್ರಿಯವಾಗಿರುವ 1391 ಪ್ರಕರಣಗಳಲ್ಲಿ 17 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 42 ಮಂದಿ ಕರೋನಾ ಸೋಂಕಿತರು ಸೋಂಕಿನಿಂದ ಮೃತಪಟ್ಟಿದ್ದು ಇಬ್ಬರು ಅನ್ಯ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ.