• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕರ್ನಾಟಕದ ಬಳಿಕ ಮಧ್ಯಪ್ರದೇಶದಲ್ಲೂ ‘ಆಪರೇಷನ್ ಕಮಲ’ ಯಶಸ್ವಿ; ಕಾಂಗ್ರೆಸ್ ಸರ್ಕಾರ ಪತನ

by
March 20, 2020
in ದೇಶ
0
ಕರ್ನಾಟಕದ ಬಳಿಕ ಮಧ್ಯಪ್ರದೇಶದಲ್ಲೂ ‘ಆಪರೇಷನ್ ಕಮಲ’ ಯಶಸ್ವಿ; ಕಾಂಗ್ರೆಸ್ ಸರ್ಕಾರ ಪತನ
Share on WhatsAppShare on FacebookShare on Telegram

ಪತ್ರಿಕಾಗೋಷ್ಠಿಯಲ್ಲಿ ತಮ್ಮ ವಿದಾಯದ ಭಾಷಣ ಮಾಡಿದ ಕಮಲನಾಥ್, ಜನತೆ ತನಗೆ ಐದು ವರ್ಷ ಅಧಿಕಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದರು. ಆದರೆ ಬಿಜೆಪಿ ನಿರಂತರವಾಗಿ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಅಸ್ಥಿರಗೊಳಿಸಲು ಷಡ್ಯಂತ್ರ ರೂಪಿಸಿತು. ಬಿಜೆಪಿಯ ಪ್ರಜಾಪ್ರಭುತ್ವ ಕಗ್ಗೊಲೆ ಮಾಡುವ ಕುತಂತ್ರಕ್ಕೆ ನಮ್ಮ 22 ಶಾಸಕರು ಕೂಡ ಬಲಿಯಾದರು. ಬಿಜೆಪಿಯು ಮಧ್ಯಪ್ರದೇಶವನ್ನು ‘ಮಾಫಿಯಾ ರಾಜ್’ ಮಾಡಿತ್ತು. ನಾನು ಮಾಫಿಯಾ ಮುಕ್ತ, ಭಯ ಮುಕ್ತ ರಾಜ್ಯ ಮಾಡಲು ಹೊರಟಿದ್ದೆ, ಆದರೆ ಬಿಜೆಪಿ ನಿರಂತರವಾಗಿ ಕಿರುಕುಳ ನೀಡಿ ತನ್ನ ಸರ್ಕಾರವನ್ನೇ ಆಹುತಿ ತೆಗೆದುಕೊಂಡಿತು ಎಂಬ ಅಸಹಾಯಕತೆಯನ್ನು ಹೊರಹಾಕಿ ರಾಜೀನಾಮೆ ನೀಡಲು ರಾಜಭವನದೆಡೆಗೆ ತೆರಳಿದರು.

ADVERTISEMENT

ವಾಸ್ತವವಾಗಿ ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಇಂದು ಕಮಲನಾಥ್ ವಿಶ್ವಾಸಮತಯಾಚನೆ ಮಾಡಬೇಕಿತ್ತು. ಇದೇ ಹಿನ್ನೆಲೆಯಲ್ಲಿ ಇವತ್ತು ಅವರು ತಮ್ಮ ಮನೆಯಲ್ಲಿ ಶಾಸಕರ ಸಭೆ ಕರೆದಿದ್ದರು. ಆ ಸಭೆಗೆ ಬೆಂಗಳೂರಿನ ರೆಸಾರ್ಟಿನಲ್ಲಿದ್ದ 22 ಶಾಸಕರು ಇರಲಿ, ಭೂಪಾಲ್ ನಲ್ಲೇ ಇದ್ದ ಕಾಂಗ್ರೆಸ್ ಪಕ್ಷದ ಮೂವರು ಶಾಸಕರು ಭಾಗವಹಿಸಿರಲಿಲ್ಲ. ಆ ಪೈಕಿ ಕೆ.ಪಿ. ಸಿಂಗ್ ಎಂಬ ಶಾಸಕ ಬಹಿರಂಗವಾಗಿ ತಾನು ಬಹುಮತ ಸಾಬೀತು ಪಡಿಸುವ ವೇಳೆ ಸರ್ಕಾರದ ವಿರುದ್ಧ ಮತ ಹಾಕುವುದಾಗಿ ಹೇಳಿದರು. ಇದಲ್ಲದೆ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡಿದ್ದ ಬಿಎಸ್‌ಪಿ ಮತ್ತು ಎಸ್‌ಪಿ ಶಾಸಕರು ಕೂಡ ಬಿಜೆಪಿಯತ್ತ ಒಲವು ತೋರಿದರು. ಈ ಬೆಳವಣಿಗೆಯಿಂದ ತಮ್ಮ ಸರ್ಕಾರ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ಕಮಲನಾಥ್ ಅವರಿಗೆ ಖಚಿತವಾಗಿತ್ತು. ಆದುದರಿಂದ ಅವರು ವಿಶ್ವಾಸಮತಯಾಚನೆಗೂ ಮುನ್ನವೇ ಪತ್ರಿಕಾಗೋಷ್ಠಿ ನಡೆಸಿ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದರು.

ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾದ 22 ಕಾಂಗ್ರೆಸ್ ಶಾಸಕರು ಈ ಮೊದಲೇ ರಾಜೀನಾಮೆ ನೀಡಿದ್ದರು. ಈ ಪೈಕಿ 6 ಮಂದಿಯ ರಾಜೀನಾಮೆಗಳು ಮಾತ್ರ ಅಂಗೀಕಾರವಾಗಿದ್ದವು. ಇಂದು ಮಧ್ಯಪ್ರದೇಶದ ಸ್ಪೀಕರ್ ಪ್ರಜಾಪತಿ ಉಳಿದ 16 ಮಂದಿಯ ರಾಜೀನಾಮೆಯನ್ನೂ ಅಂಗೀಕರಿಸಿದರು. ಇದರಿಂದಾಗಿ ಸದನದ ಸಂಖ್ಯಾಬಲ 206ಕ್ಕೆ ಇಳಿದು ಕಾಂಗ್ರೆಸ್‌ ಬಲ 92ಕ್ಕೆ ಕುಸಿದಿತ್ತು. ಇನ್ನೊಂದೆಡೆ ಬಿಜೆಪಿಯು 107 ಸದಸ್ಯರ ಬಲದೊಂದಿಗೆ ಸರಳ ಬಹುಮತ ಹೊಂದಿದೆ.

ಕಮಲನಾಥ್ ಸರ್ಕಾರ ರಚಿಸಿದ ಮೊದಲ ದಿನದಿಂದಲೂ ಅವರ ವಿರುದ್ಧ ಕೆಲ ಶಾಸಕರ ಅಸಮಾಧಾನ ಇದ್ದೇ ಇತ್ತು. ಒಂದೊಂದೇ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳುತ್ತಿದ್ದ ಬಿಜೆಪಿ, ಮಧ್ಯಪ್ರದೇಶ ಕಾಂಗ್ರೆಸ್ ಪಕ್ಷದ ಒಳಗೆ ನಡೆಯುತ್ತಿದ್ದ ಭಿನ್ನಮತೀಯ ಚಟುವಟಿಕೆಗೆ ಹೊರಗಿನಿಂದ ಗೊಬ್ಬರ ನೀರೆರೆಯುತ್ತಿತ್ತು. ಇದು ಹರಳುಗಟ್ಟಲು 15 ತಿಂಗಳು ಬೇಕಾಯಿತು‌.

2018ರ ಡಿಸೆಂಬರ್ 11 ಮಧ್ಯಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದು ಎಸ್ ಪಿ, ಬಿಎಸ್ ಪಿ ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ಸರ್ಕಾರ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾದಾಗ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆರಿಸಿದ್ದು 73 ವರ್ಷದ ಅನುಭವಿ ಮತ್ತು ಸಂಪತ್ಭರಿತ ವ್ಯಕ್ತಿ ಕಮಲನಾಥ್ ಅವರನ್ನು. ಮುಂದೆ ಬಂದೊದಗಬಹುದಾದ ರಾಜಕೀಯ ಸಂದಿಗ್ಧ ಸ್ಥಿತಿಗಳೆಲ್ಲವನ್ನೂ ಕಮಲನಾಥ್ ನಿಭಾಯಿಸುತ್ತಾರೆ ಎಂಬ ಅಚಲವಾದ ವಿಶ್ವಾಸವಿತ್ತು ಹೈಕಮಾಂಡಿಗೆ. ಆದರೆ ಕಡೆಗೂ ಮುಖ್ಯಮಂತ್ರಿ ಪದವಿ ಮೇಲೆ ಕಣ್ಣಿಟ್ಟಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರ ವಿಶ್ವಾಸವನ್ನು ಗೆಲ್ಲಲು‌ ಕಮಲನಾಥ್ ಯಶಸ್ಸು ಸಾಧಿಸಲೇ ಇಲ್ಲ.

ಮುಂದೆ ರಾಜಸ್ಥಾನ?

ರಾಜಸ್ಥಾನದ ಪರಿಸ್ಥಿತಿ ಭಿನ್ನವಾಗಿಲ್ಲ. ಅಲ್ಲಿನ ಕಾಂಗ್ರೆಸ್ ಸರ್ಕಾರಕ್ಕಿರುವುದು ಸರಳ ಬಹುಮತವಷ್ಟೇ. ಜೊತೆಗೆ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಬಂಡಾಯವೂ ಇದೆ. ಈ ಪರಿಸ್ಥಿತಿಯನ್ನು ಲಾಭ ಮಾಡಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಲೇ ಇದೆ. ಈಗ ಮಧ್ಯಪ್ರದೇಶದಲ್ಲಿ ಸರ್ಕಾರ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷದ ಸ್ಫೂರ್ತಿ ಪಾತಳದತ್ತ ಮುಖಮಾಡಿದೆ. ಕರ್ನಾಟಕದ ಬಳಿಕ ಮಧ್ಯಪ್ರದೇಶದಲ್ಲಿ ಕಮಲ ಅರಳಿಸಿದ ಬಿಜೆಪಿಯ ಉತ್ಸಾಹ ಮುಗಿಲ್ಮುಖವಾಗಿದೆ. ಇಷ್ಟರ ನಡುವೆ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕೆಡವಿದ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ರಾಜಸ್ಥಾನದ ಮಹತ್ವಾಕಾಂಕ್ಷಿ ಸಚಿನ್ ಪೈಲೆಟ್ ಒಳ್ಳೆಯ ಸ್ನೇಹಿತರು ಎಂಬುದು ಗಮನಿಸಬೇಕಾದ ಸಂಗತಿ.

Tags: Congress GovernmentKamal NathMadhyapradeshoperation lotusಆಪರೇಷನ್ ಕಮಲಕಾಂಗ್ರೆಸ್‌ ಸರ್ಕಾರಮಧ್ಯಪ್ರದೇಶ
Previous Post

ಕ್ಲೈಮ್ಯಾಕ್ಸ್ ಹಂತ ತಲುಪಿದ ಮಧ್ಯಪ್ರದೇಶ  ಬಿಕ್ಕಟ್ಟು… ಇಂದು ನಡೆಯಲಿದೆ ವಿಶ್ವಾಸಮತ!     

Next Post

ಕಿಯೋನಿಕ್ಸ್ ಕರ್ಮಕಾಂಡ: ಎಂಡಿ ಪರಮಾಧಿಕಾರ ಪ್ರಶ್ನಿಸುವಂತಿಲ್ಲ!

Related Posts

Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
0

ಆರ್‌ಎಸ್‌ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರದ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಅವರು, ಎರಡೂವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ಕೋಮಾ ಸ್ಥಿತಿಯಲ್ಲಿದೆ. ಪ್ರಿಯಾಂಕ್ ಖರ್ಗೆ ತಮ್ಮ ಖಾತೆ...

Read moreDetails

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
Next Post
ಕಿಯೋನಿಕ್ಸ್ ಕರ್ಮಕಾಂಡ: ಎಂಡಿ ಪರಮಾಧಿಕಾರ ಪ್ರಶ್ನಿಸುವಂತಿಲ್ಲ!

ಕಿಯೋನಿಕ್ಸ್ ಕರ್ಮಕಾಂಡ: ಎಂಡಿ ಪರಮಾಧಿಕಾರ ಪ್ರಶ್ನಿಸುವಂತಿಲ್ಲ!

Please login to join discussion

Recent News

Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada