ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್ 1ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 3652 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 2167 ಹೊಸ ಪ್ರಕರಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,27,064ತಲುಪಿದ್ದು, ಇವರಲ್ಲಿ 7,65,261ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 50,592 ಪ್ರಕರಣಗಳಲ್ಲಿ, 935 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,192 ಮಂದಿ ಅಸುನೀಗಿದ್ದಾರೆ.