ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್ 13ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9894 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3479 ಹೊಸ ಪ್ರಕರಣಗಳು ಕಂಡು ಬಂದಿವೆ. ಇಂದು ರಾಜ್ಯಾದ್ಯಂತ 8402 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 4,59,445 ತಲುಪಿದ್ದು, ಇವರಲ್ಲಿ 3,52,958 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 99,203 ಪ್ರಕರಣಗಳಲ್ಲಿ, 807 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 7265 ಮಂದಿ ಅಸುನೀಗಿದ್ದಾರೆ.
 
			
 
                                 
                                 
                                
