ಕರ್ನಾಟಕ ಆರೋಗ್ಯ ಇಲಾಖೆ ಗುರುವಾರ ಹೊರಡಿಸಿರುವ ಕೋವಿಡ್ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 3,693 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 55,115ಕ್ಕೇರಿದೆ. ಇವುಗಳಲ್ಲಿ 20,757 ಸೋಂಕಿತರು ಈಗಾಗಲೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು 1147 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 33,205 ಕ್ಕೇರಿದರೆ, ಇವರಲ್ಲಿ 568 ಜನರು ಐಸಿಯುನಲ್ಲಿ ದಾಖಲಾಗಿದ್ದಾರೆ. ಇನ್ನು, ಕಳೆದ 24 ಗಂಟೆಗಳಲ್ಲಿ 1028 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 2208 ಹೊಸ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್ ಸಾವುಗಳು (582) ಬೆಂಗಳೂರಿನಲ್ಲಿ ದಾಖಲಾಗಿವೆ.
ದೇಶಾದ್ಯಂತ 34,956 ಹೊಸ ಕರೋನಾ ಪ್ರಕರಣಗಳು ಕಂಡುಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 10 ಲಕ್ಷ ದಾಟಿದೆ. ಅವರಲ್ಲಿ 25 ಸಾವಿರಕ್ಕೂ ಹೆಚ್ಚು ಮಂದಿ ಕರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.







