ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 3,648 ವ್ಯಕ್ತಿಗಳಿಗೆ ಕೋವಿಡ್-19 ಸೋಂಕು ಇರುವುದು ಪತ್ತೆಯಾಗಿದೆ. ಕೇವಲ ಬೆಂಗಳೂರು ಒಂದಲ್ಲೇ 1,452 ಜನರಲ್ಲಿ ಸೋಂಕು ಇರುವುದು ತಿಳಿದುಬಂದಿದೆ. ಕರ್ನಾಟಕದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 67,420 ಕ್ಕೇರಿದೆ.
ಈವರೆಗೆ 23,795 ಸೋಂಕಿತರು ಗುಣಮುಖರಾಗಿದ್ದು, 42,216 ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೋನಾ ವೈರಸ್ ರಾಜ್ಯದಲ್ಲಿ 1403 ಜನರನ್ನು ಬಲಿ ಪಡೆದಿದ್ದರೆ, 580 ಮಂದಿಯನ್ನು ಐಸಿಯುನಲ್ಲಿ ದಾಖಲಿಸಲಾಗಿದೆ.
ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಇಂದು ಬೆಂಗಳೂರಿನ ನಂತರ ಬಳ್ಳಾರಿಯಲ್ಲಿ ಅತೀ ಹೆಚ್ಚು ಅಂದರೆ 234 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿರುವ ಒಟ್ಟು ಸೋಂಕಿತರ ಸಂಖ್ಯೆ 33,229 ಕ್ಕೇರಿದೆ. ಉಳಿದೆಲ್ಲಾ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಅತೀ ಹೆಚ್ಚು ಸಾವುಗಳು (698) ದಾಖಲಾಗಿವೆ.
ಇನ್ನು ದೇಶಾದ್ಯಂತ 40,425 ಹೊಸ ಪ್ರಕರಣಗಳು ಒಂದೇ ದಿನದಲ್ಲಿ ಪತ್ತೆಯಾಗಿದ್ದು, ಒಟ್ಟು 11,18,043 ಕರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ದೇಶದಲ್ಲಿ ಇದುವರೆಗೂ 27,497 ಕರೋನಾ ಸೋಂಕಿತರು ಸೋಂಕಿನಿಂದ ಮೃತಪಟ್ಟಿದ್ದಾರೆ.