ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್ 11 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9464 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3426 ಹೊಸ ಪ್ರಕರಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 4,40,411 ತಲುಪಿದ್ದು, ಇವರಲ್ಲಿ 3,34,999 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 98,326 ಪ್ರಕರಣಗಳಲ್ಲಿ, 770 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 7,067 ಮಂದಿ ಅಸುನೀಗಿದ್ದಾರೆ.