• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ ಬಂದ್‌ ಯಶಸ್ವಿಗೊಳಿಸುವಂತೆ ಕರೆ ನೀಡಿದ ಕರವೇ

by
December 1, 2020
in ಕರ್ನಾಟಕ
0
ಕರ್ನಾಟಕ ಬಂದ್‌ ಯಶಸ್ವಿಗೊಳಿಸುವಂತೆ ಕರೆ ನೀಡಿದ ಕರವೇ
Share on WhatsAppShare on FacebookShare on Telegram

ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ಶಾಸಕರುಗಳ ಕನ್ನಡ ವಿರೋಧಿ ನಡವಳಿಕೆಗಳ ಹಿನ್ನೆಲೆಯಲ್ಲಿ ಡಿಸೆಂಬರ್ 5 ರಂದು ಕರೆ ನೀಡಲಾಗಿರುವ ‘ಕರ್ನಾಟಕ ಬಂದ್’ ಯಶಸ್ವಿಗೊಳಿಸಲು ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದೆ.

ADVERTISEMENT

ಈ ಕುರಿತಾಗಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ ಗೌಡ ಅವರು, ಕಾರ್ಯಕರ್ತರು ಡಿಸೆಂಬರ್ ಐದರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದ್ದಾರೆ. ಅದೇ ರೀತಿ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ/ ತಹಸೀಲ್ದಾರ್ ಕಚೇರಿಗಳಿಗೆ ಮುತ್ತಿಗೆ ಹಾಕಲಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಸಾವಿರಾರು ಕರವೇ ಕಾರ್ಯಕರ್ತರು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ, ಎಂದು ಹೇಳಿದ್ದಾರೆ.

ನಮ್ಮ ಪ್ರತಿಭಟನೆ ಯಾವುದೇ ಸಮಾಜದ ವಿರೋಧವಲ್ಲ, ಬದಲಾಗಿ ರಾಜಕೀಯ ಲಾಭಕ್ಕಾಗಿ ಸರ್ಕಾರ ನಡೆಸುತ್ತಿರುವ ಒಡೆದು ಆಳುವ ನೀತಿಗೆ ವಿರುದ್ಧ. ಹೀಗಾಗಿ ಯಾವುದೇ ಭಾಗದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಅಹಿತಕರ ಘಟನೆಗಳು‌ ನಡೆಯದಂತೆ, ಶಾಂತಿಯುತ ಬಂದ್ ನಡೆಸಲು ಕಾರ್ಯಕರ್ತರಿಗೆ ಈಗಾಗಲೇ ಸೂಚನೆ ನೀಡಲಾಗಿದೆ, ಎಂದಿದ್ದಾರೆ.

“ಮರಾಠಾ ಪ್ರಾಧಿಕಾರ ರಚನೆ ಸಂಬಂಧ ಮುಖ್ಯಮಂತ್ರಿಗಳು ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ನಡೆಸಬಹುದಿತ್ತು. ಆದರೆ ಮುಖ್ಯಮಂತ್ರಿಗಳಾದಿಯಾಗಿ ಸರ್ಕಾರವನ್ನು‌‌ ನಡೆಸುತ್ತಿರುವವರು ಹುಂಬತನದಿಂದ ಆಕ್ರಮಣಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಆಳುವ ಪಕ್ಷದ ಶಾಸಕರುಗಳೇ ನಾಲಿಗೆ ಹರಿಬಿಟ್ಟು ಕನ್ನಡಪರ ಸಂಘಟನೆಗಳನ್ನು ದೂಷಿಸುತ್ತಿದ್ದಾರೆ. ಈ ಕನ್ನಡದ್ರೋಹಿ ಶಾಸಕರುಗಳು ʼನಮಗೆ ಕನ್ನಡಿಗರ ಮತ ಬೇಕಿಲ್ಲʼ ಎಂಬಂಥ ಉದ್ಧಟತನದ ಹೇಳಿಕೆಗಳನ್ನೂ ನೀಡಿದ್ದಾರೆ. ಆದರೆ ದುರದೃಷ್ಟವಶಾತ್ ಈ ಹೇಳಿಕೆಗಳನ್ನು ಖಂಡಿಸದೆ ಸರ್ಕಾರ ಮೌನ ಸಮ್ಮತಿ‌ ನೀಡಿರುವುದು ಕನ್ನಡ ಕಾರ್ಯಕರ್ತರ‌ನ್ನು ಕೆರಳಿಸಿದೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ಬಂದ್’ ನಡೆಸಲು ಕಾರಣಕರ್ತರು ಸರ್ಕಾರದವರೇ ಹೊರತು ಕನ್ನಡಪರ ಸಂಘಟನೆಗಳಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ,” ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪುರಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಸ್ಥಾನದವರೆಗೆ ತಲುಪಲು ಅವರು ಹೋರಾಟದ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದೇ ಕಾರಣ. ಆದರೆ ಅವರೇ ಇಂದು ಹೋರಾಟಗಾರರಿಗೆ ಪೊಲೀಸರನ್ನು ಬಳಸಿಕೊಂಡು ಹೋರಾಟ ಹತ್ತಿಕ್ಕುವ ಬೆದರಿಕೆ ಒಡ್ಡುತ್ತಿದ್ದಾರೆ. ಮುಖ್ಯಮಂತ್ರಿಗಳು ಆತ್ಮವಿಮರ್ಶೆ ಮಾಡಿಕೊಂಡು ಈ ಬೆದರಿಕೆ ತಂತ್ರವನ್ನು ಕೈಬಿಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪ್ರಬುದ್ಧತೆ ಮೆರೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ಬಂದ್ ವೇಳೆ ವೈದ್ಯಕೀಯ ಸೇವೆಗಳು, ಆಂಬುಲೆನ್ಸ್, ಔಷಧಿ ಅಂಗಡಿಗಳು, ಹಾಲು-ದಿನಪತ್ರಿಕೆ ಸರಬರಾಜಿನಂಥ ಅಗತ್ಯ ಸೇವೆಗಳಲ್ಲಿ ವ್ಯತ್ಯಯವಾಗುವುದಿಲ್ಲ. ಸಂಚಾರ ವ್ಯವಸ್ಥೆ ಸ್ಥಗಿತಗೊಳ್ಳುವುದರಿಂದ ನಾಗರಿಕರು ಡಿಸೆಂಬರ್ 5ರಂದು ಮನೆಯಲ್ಲೇ ಉಳಿದು ಬಂದ್ ಬೆಂಬಲಿಸಬೇಕೆಂದು ವೇದಿಕೆ ಮನವಿ ಮಾಡಿದೆ.

Previous Post

ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ – ಸಿದ್ದರಾಮಯ್ಯ

Next Post

ತಮಿಳುನಾಡು ರಾಜಕೀಯ: ಅಂದು ಎಂಜಿಆರ್-ಶಿವಾಜಿ ಗಣೇಶನ್; ಇಂದು ರಜಿನಿ-ಕಮಲ್

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ತಮಿಳುನಾಡು ರಾಜಕೀಯ: ಅಂದು ಎಂಜಿಆರ್-ಶಿವಾಜಿ ಗಣೇಶನ್; ಇಂದು ರಜಿನಿ-ಕಮಲ್

ತಮಿಳುನಾಡು ರಾಜಕೀಯ: ಅಂದು ಎಂಜಿಆರ್-ಶಿವಾಜಿ ಗಣೇಶನ್; ಇಂದು ರಜಿನಿ-ಕಮಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada