ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಕ್ಟೋಬರ್ 04 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 10145 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 4340 ಹೊಸ ಪ್ರಕರಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 6,40,661 ತಲುಪಿದ್ದು, ಇವರಲ್ಲಿ 5,15,782 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 1,15,574 ಪ್ರಕರಣಗಳಲ್ಲಿ, 847 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 9.286 ಮಂದಿ ಅಸುನೀಗಿದ್ದಾರೆ.