ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಜೂನ್ 25 ರ ಸಂಜೆ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ ರಾಜ್ಯದಲ್ಲಿ 442 ಹೊಸ ಪ್ರಕರಣಗಳು ದಾಖಲಾಗಿದೆ. ಅದರೊಂದಿಗೆ ರಾಜ್ಯದಲ್ಲಿ ಕಂಡು ಬಂದ ಕರೋನಾ ಪ್ರಕರಣಗಳ ಸಂಕ್ಯೆ 10,560 ತಲುಪಿದೆ.
ಇಂದು ರಾಜ್ಯದಲ್ಲಿ 519 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 6,670 ತಲುಪಿದೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಕರೋನಾ ಸೋಂಕಿತರ ಸಂಖ್ಯೆ 3716 ಇದೆ. ಇಂದು ಸೋಂಕಿನಿಂದಾಗಿ 6 ಮಂದಿ ಮೃತಪಟ್ಟಿದ್ದು ಒಟ್ಟು 170 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸಕ್ರಿಯ ಕರೋನಾ ಸೋಂಕಿತರಲ್ಲಿ 160 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕರೋನಾ ಸೋಂಕು ಅಪಾಯಕಾರಿಯಾಗಿ ಕಂಡು ಬರುತ್ತಿದೆ. ರಾಜ್ಯದ ಉಳಿದ ಭಾಗಗಳಿಗೆ ಹೋಲಿಸಿದರೆ ಬೆಂಗಳೂರಲ್ಲಿ ಮರಣ ಪ್ರಮಾಣ ಹೆಚ್ಚಿದೆ, ಅದೇ ವೇಳೆ ಚೇತರಿಸಿಕೊಳ್ಳುವವರ ಪ್ರಮಾಣ ಕಡಿಮೆಯಿದೆ.
ಇನ್ನು ದೇಶದಲ್ಲಿ 16,922 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೂ ದೇಶದಲ್ಲಿ 4,73,103 ಮಂದಿಯಲ್ಲಿ ಕರೋನಾ ಸೋಂಕು ಪತ್ತೆಯಾಗಿವೆ. ಅದರಲ್ಲಿ 2,71,697 ಮಂದಿಯಲ್ಲಿ ಸೋಂಕು ಚೇತರಿಕೆ ಕಂಡುಬಂದಿದೆ. ಇದುವರೆಗೂ ದೇಶದಲ್ಲಿ 14,894 ಜನರು ಕರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.






