ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್ 24 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 1870 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರು ನಗರದಲ್ಲಿ 927 ಹೊಸ ಪ್ರಕರಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,76,425 ತಲುಪಿದ್ದು, ಇವರಲ್ಲಿ 8,40,099 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 24,612 ಪ್ರಕರಣಗಳಲ್ಲಿ, 418 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,695 ಮಂದಿ ಅಸುನೀಗಿದ್ದಾರೆ.