ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್ 7 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 2258 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 1046 ಹೊಸ ಪ್ರಕರಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,44,147 ತಲುಪಿದ್ದು, ಇವರಲ್ಲಿ 7,99,439 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 33,320 ಪ್ರಕರಣಗಳಲ್ಲಿ, 887 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,369 ಮಂದಿ ಅಸುನೀಗಿದ್ದಾರೆ.






