ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೂನ್ 29ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ಕಳೆದ 24 ಗಂಟೆಗಳಲ್ಲಿ 1105 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಒಟ್ಟು ಕಂಡು ಬಂದ ಕರೋನಾ ಸೋಂಕಿತರ ಸಂಖ್ಯೆ 14,295ಕ್ಕೇರಿದೆ.
ಬೆಂಗಳೂರು ಒಂದರಲ್ಲೇ 738 ಕರೋನಾ ಸೋಂಕು ಪತ್ತೆಯಾಗಿದ್ದು, ರಾಜಧಾನಿಯಲ್ಲಿ ಕರೋನಾತಂಕ ಇನ್ನಷ್ಟು ಹೆಚ್ಚಾಗುವಂತೆ ಮಾಡಿದೆ.
ಇಂದು 176 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ರಾಜ್ಯದಲ್ಲಿ 7683 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಇತ್ತೀಚಿಗಿನ ವರದಿಗಳಲ್ಲಿ ರಾಜ್ಯದಲ್ಲಿ ಕರೋನಾ ಸೋಂಕು ತೀವ್ರವಾಗಿ ಹಬ್ಬುತ್ತಿರುವುದು ಸ್ಪಷ್ಟವಾಗುತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರವು ಬೆಡ್ಗಳನ್ನು ಹೊಂದಿಸಲು ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ಗಳ ವ್ಯವಸ್ಥೆ ಮಾಡಲು ಸರ್ಕಾರವು ನಿರ್ಧರಿಸಿದ್ದು ಈ ಕುರಿತಾಗಿ ಆದೇಶವನ್ನೂ ಹೊರಡಿಸಲಾಗಿದೆ.