ಕರ್ನಾಟಕ ಆರೋಗ್ಯ ಇಲಾಖೆ ಗುರುವಾರ ಹೊರಡಿಸಿರುವ ಕೋವಿಡ್ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2228 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 31,105ಕ್ಕೇರಿದೆ. ಇವುಗಳಲ್ಲಿ 12,833 ಸೋಂಕಿತರು ಈಗಾಗಲೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು 486 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 17,782ಕ್ಕೇರಿದರೆ, ಇವರಲ್ಲಿ 457 ಜನರು ಐಸಿಯುನಲ್ಲಿ ದಾಖಲಾಗಿದ್ದಾರೆ. ಇನ್ನು, ಕಳೆದ 24 ಗಂಟೆಗಳಲ್ಲಿ 957 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 1373 ಹೊಸ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್ ಸಾವುಗಳು (177) ಬೆಂಗಳೂರಿನಲ್ಲಿ ದಾಖಲಾಗಿವೆ. ದಕ್ಷಿಣ ಕನ್ನಡದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಸತತ ಎರಡನೇ ದಿನ 150ರ ಗಡಿ ದಾಟಿದೆ. ಇಂದು ದ.ಕ.ದಲ್ಲಿ ದಾಖಲಾದ ಹೊಸ ಪ್ರಕರಣಗಳ ಸಂಖ್ಯೆ 167.
ಇನ್ನು ಕರೋನಾ ವಿರುದ್ದ ಹೋರಾಡಲು ರಾಜ್ಯ ಸರ್ಕಾರವು ಪ್ರಯತ್ನವನ್ನು ಮಾಡುತ್ತಿದ್ದು 5665 BIECನಲ್ಲಿ 10000 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ನ ನಿರ್ಮಾನ ಸಮರೋಪಾದಿಯಲ್ಲಿ ಸಾಗುತ್ತಿದೆ.