ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜುಲೈ12ರಂದು ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ಕಳೆದ 24 ಗಂಟೆಗಳಲ್ಲಿ 2627 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 38,843ಕ್ಕೇರಿದೆ. ಬೆಂಗಳೂರು ಒಂದರಲ್ಲೇ 1525 ಪ್ರಕರಣಗಳು ದಾಖಲಾಗಿವೆ.
ಇದುವರೆಗೂ ರಾಜ್ಯದಲ್ಲಿ 15,409 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ರಾಜ್ಯದಲ್ಲಿ ಸಕ್ರಿಯವಾಗಿರುವ 22,746 ಪ್ರಕರಣಗಳಲ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿರುವ 532 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದಾಗಿ 684 ಮಂದಿ ಅಸುನೀಗಿದ್ದಾರೆಂದು ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.
ಇಂದು ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ದಕ್ಷಿಣ ಕನ್ನಡ 196, ಧಾರವಾಡ 129 ಮತ್ತು ಯಾದಗಿರಿಯಲ್ಲಿ 120 ಪ್ರಕರಣಗಳು ಕಂಡುಬಂದಿವೆ.