ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಕ್ಟೋಬರ್ 31 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 3014 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 1621 ಹೊಸ ಪ್ರಕರಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,23,412 ತಲುಪಿದ್ದು, ಇವರಲ್ಲಿ 7,57,208 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 55,017 ಪ್ರಕರಣಗಳಲ್ಲಿ, 956 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,168 ಮಂದಿ ಅಸುನೀಗಿದ್ದಾರೆ.