ರಾಜ್ಯದಲ್ಲಿ 2738 ಹೊಸ ಕರೋನಾ ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಇದುವರೆಗೂ ಧೃಡಪಟ್ಟ ಕರೋನಾ ಸೋಂಕಿತರ ಸಂಖ್ಯೆ 41,581 ತಲುಪಿದೆ. ಕಳೆದ 24 ಗಂಟೆಗಳಲ್ಲಿ 839 ಮಂದಿ ಸೋಂಕಿತರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಹೊಂದಿದ್ದಾರೆ. ರಾಜ್ಯದಲ್ಲಿ ಇದುವರೆಗೂ 16,248 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಸದ್ಯ 24,572 ಸಕ್ರಿಯ ಕರೋನಾ ಪ್ರಕರಣಗಳಿವೆ. ಕಳೆದ ಒಂದೇ ದಿನದಲ್ಲಿ 73 ಮಂದಿ ಸೋಂಕಿತರು ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 757 ತಲುಪಿದೆ. 545 ಮಂದಿ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ ಕರೋನಾ ಹರಡುವಿಕೆಯ ವೇಗದಲ್ಲಿ ತೀವ್ರವಾಗಿ ಹೆಚ್ಚಿದ್ದು ದಿನವೊಂದಕ್ಕೆ ಒಂದು ಸಾವಿರಕ್ಕಿಂತಲೂ ಅಧಿಕ ಪ್ರಕರಣ ಪತ್ತೆಯಾಗುತ್ತಿದೆ. ನಗರದಲ್ಲಿ 1315 ಹೊಸ ಕರೋನಾ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಧೃಡಪಟ್ಟ ಪ್ರಕರಣಗಳ ಸಂಖ್ಯೆ 19,702 ತಲುಪಿದೆ. ಚೇತರಿಕೆಯ ಪ್ರಮಾಣ ತೀರಾ ಕಡಿಮೆಯಿದ್ದು, ಇದುವರೆಗೂ ಕೇವಲ 4328 ಮಂದಿಯಷ್ಟೇ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದುವರೆಗೂ ನಗರವೊಂದರಲ್ಲೇ 321 ಮಂದಿ ಸೋಂಕಿತರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಇನ್ನು ದೇಶಾದ್ಯಂತ 28701 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 8,78,254 ತಲುಪಿದೆ. ಇದುವರೆಗೂ 5,53,871 ಮಂದಿ ಸೋಂಕಿತರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಒಟ್ಟು 301,609 ಸಕ್ರಿಯ ಕರೋನಾ ಪ್ರಕರಣಗಳಿವೆ. ದೇಶಾದ್ಯಂತ ಒಟ್ಟು 23,174 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
