ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 19ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 8,642 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕ್ಕೇರಿದೆ.
ಇದುವರೆಗೂ ರಾಜ್ಯದಲ್ಲಿ 1,64,150 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 81,097 ಸಕ್ರಿಯ ಕರೋನಾ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 7201 ಸೋಂಕಿತರು ಬಿಡುಗಡೆಹೊಂದಿದ್ದಾರೆ. 704 ಮಂದಿ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,804 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 96,910 ತಲುಪಿದೆ. ಒಟ್ಟು 62,041 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,588 ಮಂದಿ ಸಾವನ್ನಪ್ಪಿದ್ದಾರೆ.






