ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಕ್ಟೋಬರ್ 06 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9993 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 5012 ಹೊಸ ಪ್ರಕರಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 657705 ತಲುಪಿದ್ದು, ಇವರಲ್ಲಿ 533074 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 115151 ಪ್ರಕರಣಗಳಲ್ಲಿ, 848 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 9461 ಮಂದಿ ಅಸುನೀಗಿದ್ದಾರೆ.