ದೆಹಲಿಯಲ್ಲಿ ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಹೇಳಿಕೊಡಲು ಪ್ರಯತ್ನಿಸುತ್ತಿದ್ದಾರೆಂದು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ಕಾಂಗ್ರೆಸ್ ನಾಯಕರ ಕಾಳೆಲೆದಿದ್ದಾರೆ.
ಪದುಚೇರಿಯ ಪುರಸಭೆ ಹಾಗೂ ಪಂಚಾಯತ್ ಚುನಾವಣೆಗಳ ಉಲ್ಲೇಖಿಸಿ ಮಾತನಾಡಿದ ಮೋದಿ, ದಶಕಗಳಿಂದ ಗಡಿ ಪ್ರದೇಶಗಳ ಅಭಿವೃದ್ಧಿಯನ್ನು ಕಡೆಗಣಿಸಿದವರು ನನಗೆ ಪ್ರಜಾಪ್ರಭುತ್ವದ ಪಾಠ ಹೇಳಿಕೊಡಲು ಪ್ರಯತ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಆಯುಷ್ಮಾನ್ ಭಾರತ ಯೋಜನೆಯನ್ನು ಪ್ರಾರಂಭಿಸಿರುವುದನ್ನು ಐತಿಹಾಸಿಕ ಕ್ಷಣವೆಂದು ಸಂಬೋಧಿಸಿದ ಮೋದಿ, ಜಮ್ಮು ಕಾಶ್ಮೀರದ ಡಿಡಿಸಿ ಚುನಾವಣೆಯಲ್ಲಿ ಅಲ್ಲಿನ ಜನ ಭಾಗವಹಿಸಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಸುಪ್ರೀಂ ಕೋರ್ಟ್ನ ಆದೇಶದ ಹೊರತಾಗಿಯೂ ಪುದುಚೇರಿಯಲ್ಲಿ ಪುರಸಭೆ ಮತ್ತು ಪಂಚಾಯತ್ ಚುನಾವಣೆ ನಡೆಯುತ್ತಿಲ್ಲ ಎಂದು ಮೋದಿ ಕಾಂಗ್ರೆಸ್ ಅನ್ನು ಟೀಕಿಸಿದರು. ಪ್ರಸ್ತುತ, ಪುದುಚೇರಿಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ.
“ದೆಹಲಿಯಲ್ಲಿ ಕೆಲವು ಜನರು ನನಗೆ ದಿನಾಲೂ ಪ್ರಜಾಪ್ರಭುತ್ವದ ಪಾಠಗಳನ್ನು ನೀಡುತ್ತಾರೆ ಮತ್ತು ನನ್ನನ್ನು ನಿಂದಿಸುತ್ತಾರೆ, ಆದರೆ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಅವರು ಪುದುಚೇರಿಯಲ್ಲಿ ಪಂಚಾಯತ್ ಮತದಾನ ನಡೆಸಿಲ್ಲ” ಎಂದು ಅವರು ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಡಿಡಿಸಿ ಚುನಾವಣೆಯಲ್ಲಿ ಪಾಲ್ಗೊಂಡ ನಾಗರಿಕರಿಗೆ ಧನ್ಯವಾದ ಹೇಳಿದ ಮೋದಿ, ಜಮ್ಮು ಮತ್ತು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಯನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ ಎಂದಿದ್ದಾರೆ.

ಕಳೆದ ವರ್ಷ ಆಗಸ್ಟ್ನಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಎಲ್ಲಾ ನಿವಾಸಿಗಳಿಗೆ ಆರೋಗ್ಯ ವಿಮೆ ವ್ಯಾಪ್ತಿಯನ್ನು ವಿಸ್ತರಿಸಲು ಪಿಎಂ ಮೋದಿ ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಾರಂಭಿಸಿದರು.
ʼಈ ಯೋಜನೆಯು ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಖಚಿತಪಡಿಸುತ್ತದೆ ಮತ್ತು ಹಣಕಾಸಿನ ಅಪಾಯದ ರಕ್ಷಣೆಯನ್ನು ಒದಗಿಸುವುದರ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ಎಲ್ಲಾ ವ್ಯಕ್ತಿಗಳು ಮತ್ತು ಸಮುದಾಯಗಳಿಗೆ ಗುಣಮಟ್ಟದ ಮತ್ತು ಕೈಗೆಟುಕುವ ಅಗತ್ಯ ಆರೋಗ್ಯ ಸೇವೆಗಳನ್ನು ಖಾತ್ರಿಪಡಿಸುತ್ತದೆʼ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.