ರಾಜ್ಯದ ಕೊಪ್ಪಳ ಜಿಲ್ಲೆಯ ಸಾಣಾಪುರದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ(Koppal sanapura rape case) ಬೆನ್ನಲ್ಲೆ, ಹಂಪಿಯಲ್ಲಿ (Hampi) ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದೆ. ಹಂಪಿ, ಕಮಲಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಹೊಟೇಲ್, ಲಾಡ್ಜ್, ರೆಸಾರ್ಟ್ ಮಾಲೀಕರೊಂದಿಗೆ ಹಂಪಿಯಲ್ಲಿ ವಿಜಯನಗರ ಜಿಲ್ಲಾ ಎಸ್ಪಿ ಶ್ರೀಹರಿಬಾಬು (SP Sri Haribabu) ಸಭೆ ನಡೆಸಿ ಖಡಕ್ ಸೂಚನೆ ನೀಡಿದ್ದಾರೆ.

ಎಲ್ಲಾ ಸ್ಥಳಗಳಲ್ಲಿ ಖಡ್ಡಾಯವಾಗಿ ಸಿಸಿ ಕ್ಯಾಮೆರಾಗಳ (CC Tv) ಕಡ್ಡಾಯ ಅಳವಡಿಕೆಗೆ ಸೂಚನೆ ನೀಡಿದ್ದು, ವಿದೇಶಿ ಹಾಗೂ ಸ್ವದೇಶಿ ಪ್ರವಾಸಿಗರ ಕುರಿತು ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ತಾಕೀತು ಮಾಡಿದ್ದಾರೆ.ಇನ್ನು ಅನುಮಾನಾಸ್ಪದ ವ್ಯಕ್ತಿಗಳು ಕಂಡರೆ ಕೂಡಲೇ ಠಾಣೆಗೆ ಮಾಹಿತಿ ನೀಡಲು ಎಸ್ಪಿ ಸೂಚನೆ ನೀಡಿದ್ದಾರೆ.

ಈಗಾಗಲೇ ಈ ಪ್ರಕರಣದಲ್ಲಿ ಮೂರನೇ ಆರೋಪಿಯನ್ನ ನಿನ್ನೆ (ಮಾ.೧೦) ಪೊಲೀಸರು ಬಂಧಿಸಿದ್ದಾರೆ.ಸದ್ಯ ಬಂಧಿತ ಆರೋಪಿ ಗಂಗಾವತಿ ಸಾಯಿ ನಗರದ ನಿವಾಸಿ ಶರಣಬಸವ.ಈ ಆರೋಪಿ ಶರಣಬಸವ, ಗಾರೆ ಕೆಲಸ ಮಾಡಿಕೊಂಡಿದ್ದ. ಘಟನೆ ಬಳಿಕ ಶರಣಬಸವ ತಲೆಮರೆಸಿಕೊಂಡಿದ್ದ. ನಿನ್ನೆ ತಮಿಳುನಾಡಿನ ಚೆನ್ನೈನಲ್ಲಿ ಶರಣಬಸವನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಇವತ್ತು ಮುಂಜಾನೆ ಗಂಗಾವತಿಗೆ ಕರೆದುಕೊಂಡು ಬಂದಿದ್ದಾರೆ.