ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 1839 ವ್ಯಕ್ತಿಗಳಿಗೆ ಕೋವಿಡ್-19 ಸೋಂಕು ಇರುವುದು ಪತ್ತೆಯಾಗಿದೆ. ಕೇವಲ ಬೆಂಗಳೂರು ಒಂದಲ್ಲೇ 1172 ಜನರಲ್ಲಿ ಸೋಮಕು ಇರುವುದು ತಿಳಿದುಬಂದಿದೆ. ಕರ್ನಾಟಕದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 21,549 ಕ್ಕೇರಿದೆ.
ಈವರೆಗೆ 9244 ಸೋಂಕಿತರು ಗುಣಮುಖರಾಗಿದ್ದು, 11,966 ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೋನಾ ವೈರಸ್ ರಾಜ್ಯದಲ್ಲಿ335 ಜನರನ್ನು ಬಲಿ ಪಡೆದಿದ್ದರೆ, 226 ಮಂದಿಯನ್ನು ಐಸಿಯುನಲ್ಲಿ ದಾಖಲಿಸಲಾಗಿದೆ.
ಇಂದು ಬೆಂಗಳೂರಿನ ನಂತರ ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚು ಅಂದರೆ 75 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿರುವ ಒಟ್ಟು ಸೋಂಕಿತರ ಸಂಖ್ಯೆ 8345ಕ್ಕೇರಿದೆ. ಉಳಿದೆಲ್ಲಾ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಅತೀ ಹೆಚ್ಚು ಸಾವುಗಳು (129) ದಾಖಲಾಗಿವೆ.
ರಾಜ್ಯ ರಾಜಧಾನಿಯಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗುತ್ತಿರುವುದರಿಂದ ಜನರು ಬೆಂಗಳೂರನ್ನು ತೊರೆಯುತ್ತಿದ್ದಾರೆ. ಇಂದು ಸಾವಿರಾರು ಜನರು ತಮ್ಮ ಮನೆಗಳನ್ನು ಖಾಲಿ ಮಾಡಿ ಊರಿನೆಡೆಗೆ ಮುಖ ಮಾಡಿರುವ ದೃಶ್ಯ ಬೆಂಗಳೂರಿನಲ್ಲಿ ಸಾಮಾನ್ಯವಾಗಿತ್ತು.






