• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್‌-19: ಸಿಎಂ ಭೇಟಿ ಮಾಡಿದ ಕೇಂದ್ರ ತಂಡ

by
July 7, 2020
in ಕರ್ನಾಟಕ
0
ಕೋವಿಡ್‌-19: ಸಿಎಂ ಭೇಟಿ ಮಾಡಿದ ಕೇಂದ್ರ ತಂಡ
Share on WhatsAppShare on FacebookShare on Telegram

ರಾಜ್ಯದಲ್ಲಿ ಕರೋನಾ ಸೋಂಕಿನ ಪ್ರಭಾವದ ಕುರಿತು ಅಧ್ಯಯನ ಮಾಡಲು ಕೇಂದ್ರದ ಅಧಿಕಾರಿಗಳ ತಂಡವೊಂದು ರಾಜ್ಯಕ್ಕೆ ಆಗಮಿಸಿದೆ. ಕೇಂದ್ರದಿಂದ ಬಂದಿರುವ ತಂಡ ರಾಜ್ಯ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಜೊತೆಗೆ ಸಭೆ ನಡೆಸಿ ಬಳಿಕ ಕಂಟೈನ್‌ಮೆಂಟ್‌ ಝೋನ್‌ಗಳಿಗೆ ಭೇಟಿ ನೀಡಿ ಕಂಟೈನ್‌ಮೆಂಟ್‌ ಝೋನ್‌ನ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಲಿದೆ.

ADVERTISEMENT

ಕರೋನಾ ಎದುರಿಸಲು ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ರಾಜ್ಯ ಸರ್ಕಾರದಿಂದ ಮಾಹಿತಿ ಪಡೆಯಲಿದೆ. ರಾಜ್ಯದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳ ಅಂಕಿಸಂಖ್ಯೆ, ಯಾವ ಹಂತದಲ್ಲಿ ಹೇಗೆ ಸೋಂಕು ಹರಡಿದೆ, ಲಾಕ್ ಡೌನ್ ನಂತರ ಮತ್ತು ಲಾಕ್ ಡೌನ್ ಸಡಿಲಿಕೆಯ ಬಳಿಕ ಕರೋನಾ ಸೋಂಕು ಹೇಗೆ ಹರಡಿದೆ, ಸಾವಿನ ಪ್ರಮಾಣ ಎಷ್ಟು, ಯಾವ ಜಿಲ್ಲೆಯಲ್ಲಿ ಹೆಚ್ಚು ಮರಣ ಪ್ರಮಾಣವಿದೆ, ಕೋವಿಡ್‌ ಕೇರ್‌ ಸೆಂಟರ್‌, ಕಂಟೈನ್‌ಮೆಂಟ್‌ ಝೋನ್‌ ಎಷ್ಟಿದೆ ಮುಂತಾದ ಅಂಕಿಅಂಶಗಳನ್ನು ತಂಡ ಕಲೆ ಹಾಕಲಿದೆ. ರಾಜ್ಯದಲ್ಲಿ ಕ್ವಾರಂಟೈನ್‌ ನಿಯಮಗಳು ಹೇಗಿದೆ, ಹೆಚ್ಚು ಪ್ರಕರಣಗಳಿರುವ ಪ್ರದೇಶದಲ್ಲಿ ಯಾವೆಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂಬುವುದನ್ನೂ ಅಧಿಕಾರಿಗಳ ತಂಡ ಗಮನಿಸಲಿದೆ.

ಕೇಂದ್ರದ ಅಧಿಕಾರಿಗಳ ತಂಡದೊಂದಿಗೆ ಭೇಟಿಗೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದಾರೆ. ಚರ್ಚೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ, ಆರೋಗ್ಯ ಸಚಿವ ಶ್ರೀರಾಮುಲು ಸಿಎಂ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಭಾಗಿ ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು. ಚರ್ಚೆಯಲ್ಲಿ ಕೊವೀಡ್ ತಡೆಗೆ ಕೈಗೊಂಡ ಕ್ರಮ ಗಳ ಬಗ್ಗೆ, ಕೇಂದ್ರದ ಅಧಿಕಾರಿಗಳ ಮುಂದೆ ಮಂಡಿಸಬೇಕಾದ ಅಂಶಗಳ ಬಗ್ಗೆ ಸಮಾಲೋಚನೆ ನಡೆಸಲಾಗಿತ್ತು.

ಐದು ಅಧಿಕಾರಿಗಳ ನೇತೃತ್ವದ ತಂಡ ಮಧ್ಯಾಹ್ನ 12:30 ಕ್ಕೆ ಸಿಎಂ ಗೃಹ ಕಛೇರಿ ಕೃಷ್ಣಾಗೆ ಆಗಮಿಸಿದ್ದು, ಮುಖ್ಯಮಂತ್ರಿ ಹಾಗೂ ಸಚಿವರನ್ನು ಭೇಟಿ ಮಾಡಿದೆ. ಆರೋಗ್ಯ ಸಚಿವ ಶ್ರೀರಾಮುಲು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಭಾಗಿಯಾಗಿದ್ದು, ಸಭೆಯಲ್ಲಿ ಕೊವೀಡ್ ವಿರುದ್ಧ ಏನೆಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ ಎಂಬುದರ ಕುರಿತು ವಿಜಯ್ ಭಾಸ್ಕರ್ ವಿಷಯ ಮಂಡನೆ ಮಾಡಿದ್ದಾರೆ.

ಅಧ್ಯಯನ ನಡೆಸಲು ಎರಡು ದಿನಗಳ ಕಾಲ ರಾಜ್ಯದಲ್ಲೇ ಉಳಿಯುವ ಕೇಂದ್ರದ ಅಧಿಕಾರಿಗಳ ತಂಡ ಕೋವಿಡ್‌ ಕೇರ್‌ ಸೆಂಟರ್‌, ಕಂಟೈನ್‌ಮೆಂಟ್‌ ಝೋನ್‌ಗಳಿಗೆ ನೇರವಾಗಿ ತೆರಳಿ ಅಧ್ಯಯನ ನಡೆಸಲಿದ್ದಾರೆ.

Previous Post

ಕರೋನಾ ಚಿಕಿತ್ಸೆಗೆ ವೈದ್ಯರ ಕೊರತೆ; ಬೆಚ್ಚಿಬೀಳಿಸುವ ಅಂಕಿಅಂಶ!

Next Post

ವೈಜಾ಼ಗ್ ವಿಷಾನಿಲ ದುರಂತ: ಸಮಗ್ರ ವರದಿ ಸಲ್ಲಿಸಿದ ಉನ್ನತಾಧಿಕಾರ ಸಮಿತಿ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ವೈಜಾ಼ಗ್ ವಿಷಾನಿಲ ದುರಂತ: ಸಮಗ್ರ ವರದಿ ಸಲ್ಲಿಸಿದ ಉನ್ನತಾಧಿಕಾರ ಸಮಿತಿ

ವೈಜಾ಼ಗ್ ವಿಷಾನಿಲ ದುರಂತ: ಸಮಗ್ರ ವರದಿ ಸಲ್ಲಿಸಿದ ಉನ್ನತಾಧಿಕಾರ ಸಮಿತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada