ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 2062 ಹೊಸ ಕರೋನಾ ಪ್ರಕರಣಗಳು ಕಂಡುಬಂದಿದ್ದು, ಒಟ್ಟು ಧೃಡೀಕರಿಸಿದ ಕರೋನಾ ಪ್ರಕರಣಗಳ ಸಂಖ್ಯೆ 28877 ತಲುಪಿದೆ. ಇಂದು 778 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಒಟ್ಟು 11,876 ಮಂದಿ ಸೋಂಕಿತರು ಸೋಂಕುಮುಕ್ತರಾಗಿದ್ದಾರೆ.
ಕಳೆದ ದಿನದಲ್ಲಿ 54 ಮಂದಿ ಕರೋನಾ ಸೋಂಕಿಗೆ ಬಲಿಯಾಗಿದ್ದು ಒಟ್ಟು ಮೃತಪಟ್ಟವರ ಸಂಖ್ಯೆ 470 ತಲುಪಿದೆ. ರಾಜ್ಯದಲ್ಲಿ ಸದ್ಯ 16527 ಸಕ್ರಿಯ ಕರೋನಾ ಪ್ರಕರಣಗಳಿವೆ. ಅದರಲ್ಲಿ 452 ಮಂದಿ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶಾದ್ಯಂತ 22,752 ಹೊಸ ಕರೋನಾ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಪತ್ತೆಯಾಗಿರುವ ಒಟ್ಟು ಕರೋನಾ ಪ್ರಕರಣಗಳ ಸಂಖ್ಯೆ 7,42,417 ದಾಟಿದೆ. ಇನ್ನು ದೇಶದಲ್ಲಿ ಕರೋನಾ ಸೋಂಕಿಗೆ ಬಲಿಯಾಗಿರುವವರ ಸಂಖ್ಯೆ 20,642 ತಲುಪಿದೆ. ಇದುವರೆಗೂ 4,56,831 ಮಂದಿ ಸೋಂಕಿತರು ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
